ಬಂಟ್ವಾಳ: ಬಿ.ಸಿ.ರೋಡ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಗುರುವಾರ ನಡೆದ ಭೀಕರ ಘಟನೆಯಲ್ಲಿ ಯುವತಿಯೊಬ್ಬರನ್ನು ಮಾರಕವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿದೆ.
ಮೃತರನ್ನು ಕಕ್ಯಪದವು ನಿವಾಸಿ ಲಾವಣ್ಯ ಎಂದು ಗುರುತಿಸಲಾಗಿದೆ. ಅವರು ಕಲ್ಲಡ್ಕದ ಖಾಸಗಿ ನರ್ಸಿಂಗ್ ಹೋಮ್‌ನಲ್ಲಿ ಉದ್ಯೋಗಿಯಾಗಿದ್ದರು ಎಂದು ತಿಳಿದುಬಂದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ತಾಲೂಕಿನ ಒಡಿಲ್ನಾಳ ಗ್ರಾಮದ ನಿವಾಸಿ ಪುರುಷೋತ್ತಮ ಗೌಡ ಅವರ ಪುತ್ರ ಚೇತನ್ ಎಂಬಾತನ ಮೇಲೆ ಶಂಕೆ ವ್ಯಕ್ತವಾಗಿದ್ದು, ಆತ ಮೃತ ಯುವತಿಯ ದೂರದ ಸಂಬಂಧಿ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಲಾವಣ್ಯ ಅವರು ಕಕ್ಯಪದವು ಕಡೆಗೆ ತೆರಳಲು ಬಿ.ಸಿ.ರೋಡ್ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು. ಇದೇ ವೇಳೆ ತಮ್ಮ ಸಂಬಂಧಿಕರೊಬ್ಬರಿಗೆ ಕರೆ ಮಾಡಿ, ತನ್ನ ಪಕ್ಕದಲ್ಲಿ ಓರ್ವ ಯುವಕ ಕುಳಿತಿದ್ದಾನೆ ಎಂದು ತಿಳಿಸಿದ್ದಾರೆ ಎನ್ನಲಾಗಿದೆ. ಇದಾದ ಬಳಿಕ ಅವರೊಂದಿಗೆ ಸಂಪರ್ಕ ಕಡಿತಗೊಂಡಿರುವುದಾಗಿ ತಿಳಿದುಬಂದಿದೆ.
ಬಸ್‌ನಲ್ಲಿದ್ದ ಪ್ರಯಾಣಿಕರ ಹೇಳಿಕೆಯಂತೆ, ಕೆಲವೇ ಕ್ಷಣಗಳಲ್ಲಿ ಲಾವಣ್ಯ ಬಸ್‌ನಿಂದ ಕೆಳಗಿಳಿದಿದ್ದಾರೆ. ಅವರ ಹಿಂದೆ ಇಳಿದ ಯುವಕ ಬ್ಯಾಗ್‌ನಲ್ಲಿದ್ದ ಹರಿತವಾದ ಆಯುಧವನ್ನು ಹೊರತೆಗೆದಿದ್ದಾನೆ. ಇದನ್ನು ಗಮನಿಸಿದ ಲಾವಣ್ಯ ಅಲ್ಲಿಂದ ಓಡಿ ತಪ್ಪಿಸಿಕೊಳ್ಳಲು ಯತ್ನಿಸಿದರೂ, ಆರೋಪಿ ಬೆನ್ನಟ್ಟಿ ಮಾರಕವಾಗಿ ಹಲ್ಲೆ ನಡೆಸಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಹಲ್ಲೆಯ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನೆಯಿಂದ ಬಸ್ ನಿಲ್ದಾಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಪ್ರಯಾಣಿಕರು ಹಾಗೂ ಸಾರ್ವಜನಿಕರು ಭಯಭೀತರಾಗಿದ್ದರು.
ಮಾಹಿತಿ ತಿಳಿಯುತ್ತಿದ್ದಂತೆಯೇ ಬಂಟ್ವಾಳ ಉಪವಿಭಾಗದ ಪೊಲೀಸ್ ಅಧಿಕಾರಿಗಳು, ನಗರ ಠಾಣೆ ಪೊಲೀಸ್ ನಿರೀಕ್ಷಕರು ಹಾಗೂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯ ಬಂಧನಕ್ಕಾಗಿ ವ್ಯಾಪಕ ಶೋಧ ಕಾರ್ಯ ಆರಂಭಿಸಿದ್ದಾರೆ.
ಹತ್ಯೆಗೆ ನಿಖರ ಕಾರಣವೇನು ಹಾಗೂ ಘಟನೆಗೆ ಕಾರಣವಾದ ಹಿನ್ನೆಲೆ ಏನು ಎಂಬುದರ ಕುರಿತು ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.
About the Author
Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.
📢 SUDDI LIVE WhatsApp Community
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.
📲 Join WhatsApp Community📢 SUDDI LIVE Facebook Page
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.
👍 Follow SUDDI LIVEನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

