ಬಂಟ್ವಾಳ: ಬಿಸಿ ರೋಡ್ ಕೆಎಸ್‌ಆರ್‌ಟಿಸಿ ಹೊಸ ಬಸ್ ನಿಲ್ದಾಣದ ಸಮೀಪ ಯುವತಿಯನ್ನು ಸಾರ್ವಜನಿಕವಾಗಿ ಮಾರಕಾಯುಧದಿಂದ ಇರಿದು ಹತ್ಯೆಗೈದ ಪ್ರಕರಣದ ಪ್ರಮುಖ ಆರೋಪಿ ಚೇತನ್‌ನನ್ನು ಬಂಟ್ವಾಳ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆದರೆ ಬಂಧನಕ್ಕೂ ಮುನ್ನವೇ ಆತ ಇಲಿ ಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ತಿಳಿದುಬಂದಿದ್ದು, ಚಿಕಿತ್ಸೆಗಾಗಿ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗುರುವಾರ ಸಂಜೆ ಬಸ್‌ಗಾಗಿ ಕಾಯುತ್ತಿದ್ದ ಲಾವಣ್ಯಾ (21–25) ಎಂಬ ಯುವತಿಯನ್ನು ಏಕಪಕ್ಷೀಯ ಪ್ರೇಮದ ಹಿನ್ನೆಲೆ ಚೇತನ್ ಮಾರಕಾಯುಧದಿಂದ ಇರಿದು ಹತ್ಯೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದ. ಘಟನೆ ಬಳಿಕ ಪೊಲೀಸರು ತಕ್ಷಣವೇ ಕಾರ್ಯಾಚರಣೆ ಆರಂಭಿಸಿ, ವಿವಿಧ ತಂಡಗಳನ್ನು ರಚಿಸಿ ಆರೋಪಿಯ ಪತ್ತೆಗೆ ಬಲೆ ಬೀಸಿದ್ದರು.
ತಲೆಮರೆಸಿಕೊಂಡಿದ್ದ ಚೇತನ್‌ನನ್ನು ಪೊಲೀಸರು ಕೊನೆಗೂ ಪತ್ತೆಹಚ್ಚಿ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾದರು. ಈ ವೇಳೆ ಪೊಲೀಸರು ತನ್ನನ್ನು ಬಂಧಿಸುವುದು ಖಚಿತ ಎನ್ನುವುದನ್ನು ಅರಿತ ಆರೋಪಿ ಇಲಿ ಪಾಷಣ ಸೇವಿಸಿದ್ದಾನೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ಆರೋಪಿಯನ್ನು ವಶಕ್ಕೆ ಪಡೆದ ಕೂಡಲೇ ಆತ ವಿಷ ಸೇವಿಸಿರುವುದು ಗೊತ್ತಾಗಿದ್ದು, ಪೊಲೀಸರು ತಕ್ಷಣವೇ ವೈದ್ಯಕೀಯ ತಪಾಸಣೆಗಾಗಿ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಆತನಿಗೆ ಚಿಕಿತ್ಸೆ ಮುಂದುವರಿದಿದ್ದು, ಆರೋಗ್ಯ ಸ್ಥಿತಿಯ ಮೇಲೆ ವೈದ್ಯರು ನಿಗಾ ವಹಿಸಿದ್ದಾರೆ.
ಪ್ರಕರಣದ ಕುರಿತು ಪ್ರತಿಕ್ರಿಯಿಸಿರುವ ಪೊಲೀಸರು, "ಹತ್ಯೆ ಪ್ರಕರಣದ ಆರೋಪಿ ಚೇತನ್‌ನನ್ನು ವಶಕ್ಕೆ ಪಡೆಯಲಾಗಿದೆ. ವಿಷ ಸೇವಿಸಿರುವ ಹಿನ್ನೆಲೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆತ ಚೇತರಿಸಿಕೊಂಡ ಬಳಿಕ ವಿಚಾರಣೆ ನಡೆಸಿ ಹತ್ಯೆಯ ಹಿಂದಿನ ಉದ್ದೇಶ ಹಾಗೂ ಘಟನೆಯ ಸಂಪೂರ್ಣ ವಿವರಗಳನ್ನು ಬಹಿರಂಗಪಡಿಸಲಾಗುವುದು. ತನಿಖೆ ಮುಂದುವರಿದಿದೆ," ಎಂದು ತಿಳಿಸಿದ್ದಾರೆ.
About the Author
Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.
📢 SUDDI LIVE WhatsApp Community
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.
📲 Join WhatsApp Community📢 SUDDI LIVE Facebook Page
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.
👍 Follow SUDDI LIVEನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

