}

ಗದಗ: ರೈತ ವಿರೋಧಿ ನೀತಿ ಖಂಡಿಸಿ ಜು.17ರಂದು ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಪ್ರತಿಭಟನೆ: ವಿಜಯೇಂದ್ರ

suddilive.com
By -
0


ಗದಗ: ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿ ಜುಲೈ 17ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.


ಗುರುವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಬಿಜೆಪಿ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಸೇರಿದಂತೆ ಪಕ್ಷದ ಎಲ್ಲಾ ಜನಪ್ರತಿನಿಧಿಗಳು ಈ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.


ಬಿಡದಿ ಟೌನ್‌ಶಿಪ್‌ ಯೋಜನೆ ವಿಚಾರದಲ್ಲಿ ರಾಜ್ಯ ಸರ್ಕಾರ ರೈತರ ಹಿತಾಸಕ್ತಿಯನ್ನು ಕಡೆಗಣಿಸಿದೆ ಎಂದು ಆರೋಪಿಸಿದ ವಿಜಯೇಂದ್ರ, ರೈತರ ಆತಂಕವನ್ನು ಪರಿಹರಿಸುವ ಬದಲು ಸರ್ಕಾರ ಅವರ ಮೇಲೆ ಒತ್ತಡ ಹೇರುವ ಕೆಲಸ ಮಾಡುತ್ತಿದೆ ಎಂದು ಟೀಕಿಸಿದರು.


ಈ ವಿಷಯದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಡೆ ಖಂಡನೀಯವಾಗಿದ್ದು, ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಇದಕ್ಕೆ ಪ್ರತಿಕ್ರಿಯಿಸಬೇಕಾಗಿದ್ದರೂ ವಿದೇಶ ಪ್ರವಾಸದಲ್ಲಿರುವುದರಿಂದ ಮೌನ ವಹಿಸಿದ್ದಾರೆ ಎಂದು ಹೇಳಿದರು.


ಬಿಡದಿ ಭಾಗದ ಫಲವತ್ತಾದ ಕೃಷಿಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿ, ಭೂಮಿ ಬಿಟ್ಟುಕೊಡುವಂತೆ ಕೆಲವರು ಬೆದರಿಕೆ ಹಾಕುತ್ತಿರುವ ಬಗ್ಗೆ ರೈತರು ದೂರು ನೀಡುತ್ತಿದ್ದಾರೆ ಎಂದರು. ಇದೇ ವೇಳೆ, "ಬಲವಂತವಾಗಿ ಭೂಮಿ ಪಡೆಯುವುದಿಲ್ಲ" ಎಂಬ ಮುಖ್ಯಮಂತ್ರಿ ಅವರ ಹೇಳಿಕೆ ಕೇವಲ ಜನರನ್ನು ದಾರಿತಪ್ಪಿಸುವ ಪ್ರಯತ್ನ ಎಂದು ಆರೋಪಿಸಿದರು.


ಮುಖ್ಯಮಂತ್ರಿಯಾದ ಬಳಿಕವೂ ಡಿ.ಕೆ. ಶಿವಕುಮಾರ್ ಅವರು ರಿಯಲ್ ಎಸ್ಟೇಟ್ ಧೋರಣೆಯಿಂದ ಹೊರಬಂದಿಲ್ಲ  ಉಪಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲೇ ರಾಮನಗರದ ಹೆಸರು ಬದಲಿಸುವ ನಿರ್ಧಾರ ಕೈಗೊಂಡಿದ್ದರು ಎಂದು ಹೇಳಿದರು.


ರಾಮನಗರ ಭಾಗದಲ್ಲಿ ಅವರ ಕುಟುಂಬದವರ ಹೆಸರಿನಲ್ಲಿ ವ್ಯಾಪಕ ಪ್ರಮಾಣದ ಭೂಮಿ ಇರುವುದರಿಂದ, ವೈಯಕ್ತಿಕ ಲಾಭಕ್ಕಾಗಿ ಸಣ್ಣ ರೈತರ ಮೇಲೆ ಒತ್ತಡ ಹೇರಿ ಕೃಷಿಯೋಗ್ಯ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಯತ್ನಿಸಲಾಗುತ್ತಿದೆ ಎಂದು ಆರೋಪಿಸಿದರು.


ರೈತರ ಭೂಮಿಯನ್ನು ಬಲವಂತವಾಗಿ ಕಸಿದುಕೊಳ್ಳುವ ಯಾವುದೇ ಪ್ರಯತ್ನವನ್ನು ಬಿಜೆಪಿ ತೀವ್ರವಾಗಿ ವಿರೋಧಿಸಲಿದೆ. ರೈತರ ಹಿತಾಸಕ್ತಿಗೆ ಧಕ್ಕೆಯಾದರೆ ಸರ್ಕಾರವೇ ಅದರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ವಿಜಯೇಂದ್ರ ಎಚ್ಚರಿಕೆ ನೀಡಿದರು.

About the Author

Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Tags:

Post a Comment

0 Comments

Post a Comment (0)
3/related/default