}

ಬ್ರಹ್ಮಾವರದಲ್ಲಿ ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ ಪತ್ತೆ: ₹7.34 ಲಕ್ಷ ಮೌಲ್ಯದ ಸೊತ್ತು ವಶ

suddilive.com
By -
0


ಬ್ರಹ್ಮಾವರ: ಸರ್ಕಾರದ ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಉಚಿತ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಲಾರಿಯನ್ನು ಕೋಟ ಪೊಲೀಸರು ಹಾಗೂ ಆಹಾರ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ.


ಆಹಾರ ನಿರೀಕ್ಷಕ ವಸಂತ ಕುಮಾರ್ ಅವರಿಗೆ ದೊರೆತ ಖಚಿತ ಮಾಹಿತಿಯ ಆಧಾರದ ಮೇಲೆ, ಕೋಟ ಪೊಲೀಸ್ ಠಾಣೆಯ ಪಿಎಸ್‌ಐ ಪ್ರವೀಣ್ ಕುಮಾರ್ ಹಾಗೂ ಸಿಬ್ಬಂದಿ ಮತ್ತು ಆಹಾರ ಇಲಾಖೆ ಅಧಿಕಾರಿಗಳು ಬ್ರಹ್ಮಾವರ ತಾಲೂಕಿನ ಮಣೂರು ಗ್ರಾಮದ ಮಹಾಲಕ್ಷ್ಮೀ ಹೋಟೆಲ್ ಎದುರು ಕಾರ್ಯಾಚರಣೆ ನಡೆಸಿದರು.


ಈ ವೇಳೆ KA-47-5533 ನೋಂದಣಿ ಸಂಖ್ಯೆಯ ಅಶೋಕ್ ಲೇಲ್ಯಾಂಡ್ ಲಾರಿಯಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಅನ್ನಭಾಗ್ಯ ಯೋಜನೆಯ 160 ಕ್ವಿಂಟಾಲ್ ಉಚಿತ ಪಡಿತರ ಅಕ್ಕಿಯನ್ನು ಕೇರಳದ ಕಾಸರಗೋಡಿಗೆ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.


ಲಾರಿಯಲ್ಲಿದ್ದ 320 ಚೀಲಗಳ ಅಕ್ಕಿಯನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಅದರ ಅಂದಾಜು ಮೌಲ್ಯ ₹3.84 ಲಕ್ಷವಾಗಿದೆ. ಅಕ್ಕಿ ಸಾಗಾಟಕ್ಕೆ ಬಳಸಲಾಗಿದ್ದ ಲಾರಿಯ ಮೌಲ್ಯ ₹3.50 ಲಕ್ಷ ಎಂದು ಅಂದಾಜಿಸಲಾಗಿದೆ. ಒಟ್ಟು ₹7.34 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.


ಈ ಸಂಬಂಧ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಕ್ರಮ ಸಾಗಾಟದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

About the Author

Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Tags:

Post a Comment

0 Comments

Post a Comment (0)
3/related/default