ಬೆಳ್ತಂಗಡಿ: ರಾಜ್ಯಾದ್ಯಂತ ವ್ಯಾಪಕ ಚರ್ಚೆಗೆ ಕಾರಣವಾಗಿದ್ದ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ 'ಬುರುಡೆ ಷಡ್ಯಂತ್ರ' ಪ್ರಕರಣದ (ಮೊಕದ್ದಮೆ ಸಂಖ್ಯೆ 39/2025) ತನಿಖೆಯನ್ನು ವಿಶೇಷ ತನಿಖಾ ದಳ (ಎಸ್‌ಐಟಿ) ಪೂರ್ಣಗೊಳಿಸಿದ್ದು, ಬೆಳ್ತಂಗಡಿಯ ನ್ಯಾಯಾಲಯಕ್ಕೆ 7,005 ಪುಟಗಳ ಅಂತಿಮ ವರದಿಯನ್ನು ಸಲ್ಲಿಸಿದೆ.
ಪ್ರಕರಣದ ತನಿಖೆ ನಡೆಸಿದ ಎಸ್‌ಐಟಿ ಅಧಿಕಾರಿಗಳ ತಂಡವು ಮಂಗಳವಾರ ಮಧ್ಯಾಹ್ನ ಬೆಳ್ತಂಗಡಿಯ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಶಶಾಂಕ್ ನಾಗೇಂದ್ರ ಭಟ್ ಅವರ ನ್ಯಾಯಾಲಯಕ್ಕೆ ಹಾಜರಾಗಿ, 12 ಸಂಪುಟಗಳಲ್ಲಿ ಸಿದ್ಧಪಡಿಸಲಾದ ಅಂತಿಮ ತನಿಖಾ ವರದಿಯನ್ನು ಸಲ್ಲಿಸಿತು.
ಈ ವರದಿಯಲ್ಲಿ ಈ ಹಿಂದೆ ಸಲ್ಲಿಸಲಾಗಿದ್ದ 3,923 ಪುಟಗಳ ತನಿಖಾ ವರದಿ ಹಾಗೂ ಇದೀಗ ಸಿದ್ಧಪಡಿಸಿರುವ 3,082 ಪುಟಗಳ ಹೆಚ್ಚುವರಿ ವರದಿ ಸೇರಿ ಒಟ್ಟು 7,005 ಪುಟಗಳ ದಾಖಲೆಗಳನ್ನು ಒಳಗೊಂಡಿದೆ.
ಈ ಹಿಂದೆ ಕಳೆದ ವರ್ಷದ ನವೆಂಬರ್ 20ರಂದು ಎಸ್‌ಐಟಿ ಅಧಿಕಾರಿಗಳು ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 215ರಡಿ ಸುಳ್ಳು ಸಾಕ್ಷ್ಯ (Perjury) ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರು. ತನಿಖೆಯ ವೇಳೆ ಪ್ರಕರಣದ ಪ್ರಮುಖ ಆರೋಪಿ ಹಾಗೂ 'ಮಾಸ್ಕ್ ಮ್ಯಾನ್' ಸಿ.ಎನ್. ಚಿನ್ನಯ್ಯ ಸೇರಿದಂತೆ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್ ಟಿ., ವಿಠಲ್ ಗೌಡ ಮತ್ತು ಸುಜಾತಾ ಭಟ್ ವಿರುದ್ಧ ದೋಷಾರೋಪ ಮಾಡಲಾಗಿದೆ.
ಅಂತಿಮ ವರದಿ ಸಲ್ಲಿಸುವ ಸಂದರ್ಭದಲ್ಲಿ ಎಸ್‌ಐಟಿ ಎಸ್‌ಪಿ ಸಿ.ಎ. ಸೈಮನ್, ಇನ್ಸ್‌ಪೆಕ್ಟರ್‌ಗಳಾದ ಕುಸುಮಾಧರ್ ಮತ್ತು ಮಂಜುನಾಥ್ ಸೇರಿದಂತೆ ತನಿಖಾ ತಂಡದ ಅಧಿಕಾರಿಗಳು ನ್ಯಾಯಾಲಯದಲ್ಲಿ ಹಾಜರಿದ್ದರು. ಪ್ರಕರಣದ ಪ್ರಮುಖ ಆರೋಪಿ ಸಿ.ಎನ್. ಚಿನ್ನಯ್ಯ ಕೂಡ ನ್ಯಾಯಾಲಯಕ್ಕೆ ಹಾಜರಾಗಿದ್ದರು.
About the Author
Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.
📢 SUDDI LIVE WhatsApp Community
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.
📲 Join WhatsApp Community📢 SUDDI LIVE Facebook Page
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.
👍 Follow SUDDI LIVEನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

