}

ಬೆಳ್ತಂಗಡಿ: ದಿಡುಪೆ ಜಲಪಾತದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ; ಐವರ ವಿರುದ್ಧ ಪ್ರಕರಣ ದಾಖಲು

suddilive.com
By -
0

 


ಬೆಳ್ತಂಗಡಿ, ಜು. 14: ದಿಡುಪೆ ಜಲಪಾತದಲ್ಲಿ ಯುವ ಜೋಡಿಯನ್ನು ತಡೆದು ನೈತಿಕ ಪೊಲೀಸ್‌ಗಿರಿ ನಡೆಸಿ ಜೀವ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಐವರು ಸೇರಿದಂತೆ ಇತರ ಕೆಲವರ ವಿರುದ್ಧ ಪ್ರಕರಣ ದಾಖಲಾಗಿದೆ.


ಮಂಗಳೂರಿನಿಂದ ಜುಲೈ 12ರಂದು ಸ್ನೇಹಿತನೊಂದಿಗೆ ದಿಡುಪೆ ಜಲಪಾತ ವೀಕ್ಷಣೆಗೆ ಬಂದಿದ್ದ ಯುವತಿ, ಅರಣ್ಯ ಇಲಾಖೆಯ ಚೆಕ್‌ಪೋಸ್ಟ್‌ನಲ್ಲಿ ಅಗತ್ಯ ಅನುಮತಿ ಪಡೆದು ಜಲಪಾತಕ್ಕೆ ತೆರಳಿದ್ದರು. ಬಳಿಕ ವಾಪಸ್ಸಾಗುತ್ತಿದ್ದ ವೇಳೆ ಸ್ಥಳೀಯ ಯುವಕರ ತಂಡ ರಸ್ತೆ ಮಧ್ಯೆ ತಡೆದು ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದೆ ಎಂದು ಅವರು ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ.


ಈ ದೂರಿನ ಆಧಾರದ ಮೇಲೆ ದಿಡುಪೆ ನಿವಾಸಿಗಳಾದ ರಂಜಿತ್, ಸುದರ್ಶನ್, ಸ್ವಸ್ತಿಕ್, ಪ್ರದೀಪ್, ದೀಕ್ಷಿತ್ ಹಾಗೂ ಇನ್ನೂ ಕೆಲವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಯುವತಿಯ ದೂರಿನ ಅನ್ವಯ ಭಾರತೀಯ ನ್ಯಾಯ ಸಂಹಿತೆ (BNS)ಯ ಸೆಕ್ಷನ್ 126(2), 352 ಮತ್ತು 351(2)ರಡಿ ಪ್ರಕರಣ ದಾಖಲಿಸಲಾಗಿದೆ

About the Author

Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Tags:

Post a Comment

0 Comments

Post a Comment (0)
3/related/default