}

ಆದಾಯ ಮೀರಿ ಆಸ್ತಿ ಗಳಿಕೆ ಕೇಸ್: ಮಾಜಿ ಸಚಿವ ಜಮೀರ್ ಪ್ರಾಸಿಕ್ಯೂಷನ್ ಅರ್ಜಿ ತಿರಸ್ಕರಿಸಿದ ರಾಜ್ಯಪಾಲರು!

suddilive.com
By -
0


ಬೆಂಗಳೂರು: ರಾಜ್ಯ ಸರ್ಕಾರದ ಪ್ರಭಾವಿ ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ವಿರುದ್ಧ ತನಿಖೆ ಹಾಗೂ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಲೋಕಾಯುಕ್ತ ಸಲ್ಲಿಸಿದ್ದ ಪ್ರಸ್ತಾವನೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತಾಂತ್ರಿಕ ಕಾರಣಗಳನ್ನು ಉಲ್ಲೇಖಿಸಿ ಹಿಂದಿರುಗಿಸಿದ್ದಾರೆ.


ಈ ಬೆಳವಣಿಗೆಯಿಂದ ಸಚಿವ ಜಮೀರ್ ಅವರಿಗೆ ಸದ್ಯಕ್ಕೆ ಕಾನೂನು ಹಾಗೂ ರಾಜಕೀಯವಾಗಿ ತಾತ್ಕಾಲಿಕ ನಿರಾಳತೆ ದೊರೆತಂತಾಗಿದೆ.


ಜಮೀರ್ ಅಹ್ಮದ್ ಖಾನ್ ವಿರುದ್ಧದ ಪ್ರಕರಣದಲ್ಲಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲು ಅಗತ್ಯವಾದ ಪ್ರಾಸಿಕ್ಯೂಷನ್ ಅನುಮತಿ ಕೋರಿ ಲೋಕಾಯುಕ್ತವು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಜಿಎಡಿ) ಮೂಲಕ ರಾಜಭವನಕ್ಕೆ ಕಡತ ಕಳುಹಿಸಿತ್ತು. ಆದರೆ ಕಡತವನ್ನು ಪರಿಶೀಲಿಸಿದ ರಾಜ್ಯಪಾಲರು, ಕೆಲವು ತಾಂತ್ರಿಕ ಲೋಪಗಳಿರುವುದನ್ನು ಸೂಚಿಸಿ ಅದನ್ನು ಮರುಪರಿಶೀಲನೆಗಾಗಿ ಹಿಂದಿರುಗಿಸಿದ್ದಾರೆ. ಹೀಗಾಗಿ ಸದ್ಯಕ್ಕೆ ಪ್ರಾಸಿಕ್ಯೂಷನ್‌ಗೆ ಅನುಮತಿ ದೊರೆತಿಲ್ಲ.


ಈ ಪ್ರಕರಣದ ಹಿನ್ನೆಲೆ ನೋಡಿದರೆ, ಜಾರಿ ನಿರ್ದೇಶನಾಲಯ (ಇಡಿ) ನೀಡಿದ್ದ ಮಾಹಿತಿ ಹಾಗೂ ದಾಳಿ ವೇಳೆ ಸಂಗ್ರಹಿಸಲಾದ ದಾಖಲೆಗಳ ಆಧಾರದಲ್ಲಿ ಅಂದಿನ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಜಮೀರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಆರೋಪದಡಿ ಪ್ರಕರಣ ದಾಖಲಿಸಿತ್ತು. ಬಳಿಕ ಎಸಿಬಿಯನ್ನು ರದ್ದುಗೊಳಿಸಿದ ಹಿನ್ನೆಲೆಯಲ್ಲಿ ಈ ಪ್ರಕರಣವನ್ನು ಲೋಕಾಯುಕ್ತಕ್ಕೆ ವರ್ಗಾಯಿಸಲಾಗಿತ್ತು.


ಪ್ರಕರಣದ ತನಿಖೆ ನಡೆಸಿದ ಲೋಕಾಯುಕ್ತ ಪೊಲೀಸರು, ಜಮೀರ್ ಅಹ್ಮದ್ ಖಾನ್ ಅವರು ತಮ್ಮ ಅಧಿಕೃತ ಆದಾಯದ ಮೂಲಗಳಿಗೆ ಹೋಲಿಸಿದರೆ ಸುಮಾರು 2,000 ಶೇಕಡಕ್ಕೂ ಹೆಚ್ಚು ಮೌಲ್ಯದ ಆಸ್ತಿಯನ್ನು ಹೊಂದಿದ್ದಾರೆ ಎಂಬ ಆರೋಪದ ಆಧಾರದಲ್ಲಿ ಚಾರ್ಜ್‌ಶೀಟ್ ಸಲ್ಲಿಸಲು ಅಗತ್ಯ ಅನುಮತಿ ಕೋರಿ ರಾಜಭವನಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. 

About the Author

Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Tags:

Post a Comment

0 Comments

Post a Comment (0)
3/related/default