}

ಬಿಡದಿ ಭೂಸ್ವಾಧೀನ ವಿವಾದ: ರೈತರ ಪರ ನಿಂತು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ ಎಚ್.ಡಿ. ಕುಮಾರಸ್ವಾಮಿ

suddilive.com
By -
0


ಬಿಡದಿ ಸ್ಮಾರ್ಟ್ ಸಿಟಿ ಯೋಜನೆಗೆ ಸಂಬಂಧಿಸಿದ ಭೂಸ್ವಾಧೀನ ವಿವಾದ ಮತ್ತಷ್ಟು ತೀವ್ರಗೊಂಡಿದೆ. ಬಿಡದಿ ಹೋಬಳಿಯ ಮಂಡಲಹಳ್ಳಿ ಗ್ರಾಮದಲ್ಲಿ ಸೋಮವಾರ (ಜುಲೈ 13) ಜಂಟಿ ಸರ್ವೇ ನಡೆಸಲು ತೆರಳಿದ್ದ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ರೈತ ಮಹಿಳೆಯರು ಪೊರಕೆಯಿಂದ ಹೊಡೆದು ಓಡಿಸಿದ ಘಟನೆ ರಾಜಕೀಯ ವಲಯದಲ್ಲೂ ಚರ್ಚೆಗೆ ಗ್ರಾಸವಾಗಿದೆ.


ಈ ಘಟನೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಪ್ರಸ್ತುತ ಪಶ್ಚಿಮ ಬಂಗಾಳ ಪ್ರವಾಸದಲ್ಲಿರುವ ಕುಮಾರಸ್ವಾಮಿ, "ಭೂಮಿ ಕಳೆದುಕೊಳ್ಳುವ ಆತಂಕದಲ್ಲಿರುವ ರೈತರು ಕಳೆದ ಸುಮಾರು 500 ದಿನಗಳಿಂದ ಬಿಡದಿಯಲ್ಲಿ ಶಾಂತಿಯುತವಾಗಿ ಹೋರಾಟ ನಡೆಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಯಾವುದೇ ಪೂರ್ವ ಮಾಹಿತಿ ಇಲ್ಲದೆ ಅಧಿಕಾರಿಗಳು ಏಕಾಏಕಿ ಜಂಟಿ ಸರ್ವೇಗೆ ಆಗಮಿಸಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಈ ಬೆಳವಣಿಗೆಗೆ ರಾಜ್ಯ ಸರ್ಕಾರದ ಬೇಜವಾಬ್ದಾರಿ ಮತ್ತು ಚಿತಾವಣೆಯೇ ಹೊಣೆಯಾಗಿದೆ" ಎಂದು ಆರೋಪಿಸಿದ್ದಾರೆ.


ಇದೇ ವೇಳೆ, ರೈತರಿಗೆ ಶಾಂತಿಯುತ ಹೋರಾಟ ಮುಂದುವರಿಸುವಂತೆ ಮನವಿ ಮಾಡಿದ ಅವರು, "ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡಬೇಡಿ. ಕಾನೂನಿನ ಚೌಕಟ್ಟಿನಲ್ಲೇ ನಮ್ಮ ಹೋರಾಟ ಮುಂದುವರಿಯೋಣ. ನಿಮ್ಮ ನೋವು ಮತ್ತು ಆಕ್ರೋಶವನ್ನು ಸರ್ಕಾರ ತನ್ನ ಅನುಕೂಲಕ್ಕೆ ಬಳಸಿಕೊಳ್ಳಲು ಅವಕಾಶ ಮಾಡಿಕೊಡಬೇಡಿ" ಎಂದು ಕರೆ ನೀಡಿದ್ದಾರೆ.


ಪೊಲೀಸ್ ಇಲಾಖೆಯನ್ನೂ ಉದ್ದೇಶಿಸಿ ಮಾತನಾಡಿದ ಕುಮಾರಸ್ವಾಮಿ, "ಶಾಂತಿಯುತವಾಗಿ ನಡೆಯುತ್ತಿರುವ ರೈತರ ಹೋರಾಟವನ್ನು ಸರ್ಕಾರ ತನ್ನ ಉದ್ದೇಶಗಳಿಗೆ ಬಳಸಿಕೊಳ್ಳಲು ಪ್ರಯತ್ನಿಸುತ್ತಿದೆ. ಯಾವುದೇ ಒತ್ತಡಕ್ಕೆ ಮಣಿದು ರೈತ ವಿರೋಧಿ ಕ್ರಮಗಳನ್ನು ಅನುಸರಿಸಬೇಡಿ. ಸರ್ಕಾರದ ತಪ್ಪು ನಡೆಗೆ ಕೈಜೋಡಿಸಿದರೆ ಅದರ ಹೊಣೆಗಾರಿಕೆಯನ್ನು ಮುಂದಿನ ದಿನಗಳಲ್ಲಿ ನೀವೂ ಹೊರುವ ಪರಿಸ್ಥಿತಿ ಎದುರಾಗಬಹುದು" ಎಂದು ಎಚ್ಚರಿಕೆ ನೀಡಿದ್ದಾರೆ.


ಕುಮಾರಸ್ವಾಮಿ ಅವರ ಈ ಹೇಳಿಕೆಯ ವಿಡಿಯೊ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಬಿಡದಿ ಭೂಸ್ವಾಧೀನ ವಿವಾದಕ್ಕೆ ಮತ್ತಷ್ಟು ರಾಜಕೀಯ ಬಣ್ಣ ಪಡೆದುಕೊಂಡಿದೆ.

About the Author

Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Tags:

Post a Comment

0 Comments

Post a Comment (0)
3/related/default