}

ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಕೆ. ಅಣ್ಣಾಮಲೈ ಭೇಟಿ; ವಿಶೇಷ ಪೂಜೆ ಸಲ್ಲಿಕೆ

suddilive.com
By -
0


ಕೊಲ್ಲೂರು: ನಿವೃತ್ತ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರು ಮಂಗಳವಾರ ಉಡುಪಿ ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಭೇಟಿ ನೀಡಿ ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.


ದೇವಳಕ್ಕೆ ಆಗಮಿಸಿದ ಅಣ್ಣಾಮಲೈ ಅವರನ್ನು ದೇವಳದ ಆಡಳಿತ ಮಂಡಳಿ, ಅರ್ಚಕ ವೃಂದ ಹಾಗೂ ಅಧಿಕಾರಿಗಳು ಆತ್ಮೀಯವಾಗಿ ಬರಮಾಡಿಕೊಂಡರು. ಬಳಿಕ ಅವರು ದೇವಿಯ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ರಾಜ್ಯ ಮತ್ತು ದೇಶದ ಜನತೆಗೆ ಸುಖ-ಶಾಂತಿ, ಸಮೃದ್ಧಿ ನೆಲೆಸಲಿ ಎಂದು ಪ್ರಾರ್ಥಿಸಿದರು.


ದರ್ಶನದ ನಂತರ ದೇವಳದ ವತಿಯಿಂದ ಶ್ರೀದೇವಿಯ ಪ್ರಸಾದ ಹಾಗೂ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು.


 ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಬಳಿಕ ಅವರು ‘ವಿ ದಿ ಲೀಡರ್’ (We The Leader) ಹೆಸರಿನ ಹೊಸ ರಾಜಕೀಯ ಚಳವಳಿಯನ್ನು ಆರಂಭಿಸಿದ್ದಾರೆ.


 ಈ ಚಳವಳಿಯನ್ನು ರಾಜಕೀಯ ಪಕ್ಷವಾಗಿ ರೂಪಿಸಿ ತಮಿಳುನಾಡಿನ ರಾಜಕೀಯದಲ್ಲಿ ಹೊಸ ಪರ್ಯಾಯವನ್ನು ಕಟ್ಟಿಕೊಡುವ ಉದ್ದೇಶವಿದೆ ಎಂದು ಅಣ್ಣಾಮಲೈ ಈಗಾಗಲೇ ಘೋಷಿಸಿದ್ದಾರೆ.



About the Author

Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Post a Comment

0 Comments

Post a Comment (0)
3/related/default