ಕಾರ್ಕಳ: ಅತಿವೇಗದಲ್ಲಿ ಬಂದ ಟಾಟಾ ಏಸ್ ಟೆಂಪೋವೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಹಿರಿಯ ಪತ್ರಕರ್ತ ಬಾಲಕೃಷ್ಣ ಭೀಮಗುಳಿ ಅವರು ಪ್ರಾಣಾಪಾಯದಿಂದ ಪಾರಾದ ಘಟನೆ ಕಾರ್ಕಳ–ನಕ್ರೆ ರಸ್ತೆಯ ಪರಪ್ಪು ಸೇತುವೆ ಸಮೀಪ ನಡೆದಿದೆ.
ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕ್ರಿಯೇಟಿವ್ ಕಾಲೇಜಿನಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ್ದ ಹಿರಿಯ ಪತ್ರಕರ್ತ ಬಿಪಿನ್ ಚಂದ್ರಲಾಲ್ ನಕ್ರೆ ಅವರನ್ನು ಅವರ ನಿವಾಸಕ್ಕೆ ಬಿಟ್ಟು ಭೀಮಗುಳಿ ಅವರು ಕಾರಿನಲ್ಲಿ ಕಾರ್ಕಳದತ್ತ ಹಿಂದಿರುಗುತ್ತಿದ್ದರು.
ಈ ವೇಳೆ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರಿನ ಸಮೀಪಕ್ಕೆ ಎದುರು ದಿಕ್ಕಿನಿಂದ ವೇಗವಾಗಿ ಬಂದ ಶ್ರೀದೇವಿ ಫರ್ನಿಚರ್ಸ್‌ಗೆ ಸೇರಿದ ಟಾಟಾ ಏಸ್ ಟೆಂಪೋ ನಿಯಂತ್ರಣ ತಪ್ಪಿ ಭೀಮಗುಳಿ ಅವರ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ರಸ್ತೆ ಬದಿಯ ಕಮರಿಗೆ ಜಾರಿದ್ದು, ಚಾಲಕನ ಬದಿಯ ಭಾಗಕ್ಕೆ ಭಾರೀ ಹಾನಿಯಾಗಿದೆ. ಟೆಂಪೋಗೂ ಹಾನಿಯಾಗಿರುವುದಾಗಿ ತಿಳಿದುಬಂದಿದೆ.
ಅದೃಷ್ಟವಶಾತ್ ಎರಡೂ ವಾಹನಗಳಲ್ಲಿದ್ದವರು ಗಂಭೀರ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಅಪಘಾತದಿಂದಾಗಿ ಕಾರ್ಕಳ–ನಕ್ರೆ ರಸ್ತೆಯಲ್ಲಿ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಬಳಿಕ ಸ್ಥಳೀಯರು ಹಾಗೂ ಸಾರ್ವಜನಿಕರು ನೆರವಿಗೆ ಧಾವಿಸಿ ಅಪಘಾತಕ್ಕೀಡಾದ ವಾಹನಗಳನ್ನು ತೆರವುಗೊಳಿಸಿದ ಬಳಿಕ ಸಂಚಾರ ಸಹಜ ಸ್ಥಿತಿಗೆ ಮರಳಿತು.
About the Author
Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.
📢 SUDDI LIVE WhatsApp Community
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.
📲 Join WhatsApp Community📢 SUDDI LIVE Facebook Page
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.
👍 Follow SUDDI LIVEನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

