}

ಕಟಪಾಡಿ ಸಮೀಪ ಬೀದಿ ನಾಯಿಗಳ ದಾಳಿ: ಎರಡು ಮರಿಗಳು ಸೇರಿ ಐದು ಮೇಕೆಗಳ ಬಲಿ, ಗ್ರಾಮಸ್ಥರಲ್ಲಿ ಆತಂಕ

suddilive.com
By -
0


ಉಡುಪಿ, ಜು. 19: ಕಟಪಾಡಿ ಸಮೀಪದ ಅಚ್ಚಡ್ ಗ್ರಾಮದಲ್ಲಿ ಬೀದಿ ನಾಯಿಗಳ ಹಾವಳಿ ಮತ್ತೆ ಆತಂಕಕ್ಕೆ ಕಾರಣವಾಗಿದ್ದು, ಶನಿವಾರ ಮುಂಜಾನೆ ಮೇಕೆ ಕೊಟ್ಟಿಗೆಗೆ ನುಗ್ಗಿದ ನಾಯಿಗಳ ಗುಂಪೊಂದು ಎರಡು ಮರಿಗಳು ಸೇರಿದಂತೆ ಐದು ಮೇಕೆಗಳನ್ನು ಕಚ್ಚಿ ಕೊಂದಿರುವ ಘಟನೆ ನಡೆದಿದೆ.


ಅಚ್ಚಡ್‌ನ ನಿವೃತ್ತ ಶಿಕ್ಷಕ ವಿಠ್ಠಲ್ ಶೇರಿಗಾರ್ ಅವರ ನಿವಾಸದಲ್ಲಿ ಈ ಘಟನೆ ಸಂಭವಿಸಿದೆ. ಅವರ ಪುತ್ರ ಪ್ರಶಾಂತ್ ಶೇರಿಗಾರ್ ಮೇಕೆ ಸಾಕಾಣಿಕೆ ನಡೆಸುತ್ತಿದ್ದು, ಮುಂಜಾನೆ ವೇಳೆ ಮೇಕೆ ಕೊಟ್ಟಿಗೆಗೆ ನುಗ್ಗಿದ ಬೀದಿ ನಾಯಿಗಳು ಮೇಕೆಗಳ ಮೇಲೆ ದಾಳಿ ನಡೆಸಿವೆ. ದಾಳಿಯ ತೀವ್ರತೆಗೆ ಎರಡು ಮರಿ ಮೇಕೆಗಳು ಸೇರಿದಂತೆ ಐದು ಮೇಕೆಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಇದರಿಂದ ಕುಟುಂಬಕ್ಕೆ ಸಾವಿರಾರು ರೂಪಾಯಿ ಆರ್ಥಿಕ ನಷ್ಟ ಉಂಟಾಗಿದೆ.


ಸ್ಥಳೀಯರ ಮಾಹಿತಿಯಂತೆ, ಅಚ್ಚಡ್ ಮಲೆ ಜುಮಾದಿ ದೈವಸ್ಥಾನದ ಸುತ್ತಮುತ್ತ ಕಳೆದ ಕೆಲವು ತಿಂಗಳುಗಳಿಂದ ಬೀದಿ ನಾಯಿಗಳ ಸಂಖ್ಯೆ ಹೆಚ್ಚಾಗಿದ್ದು, ಅವು ಜಾನುವಾರುಗಳ ಮೇಲೆ ನಿರಂತರವಾಗಿ ದಾಳಿ ನಡೆಸುತ್ತಿರುವುದಾಗಿ ಆರೋಪಿಸಲಾಗಿದೆ. ರಾತ್ರಿ ಮತ್ತು ಮುಂಜಾನೆ ವೇಳೆಯಲ್ಲಿ ನಾಯಿಗಳ ಗುಂಪು ಸಂಚರಿಸುತ್ತಿರುವುದರಿಂದ ಗ್ರಾಮಸ್ಥರು ಭಯಭೀತರಾಗಿದ್ದಾರೆ.


ಇದರಿಂದ ಸಾರ್ವಜನಿಕರ ಸುರಕ್ಷತೆಯ ಮೇಲೂ ಪ್ರಶ್ನೆಗಳು ಮೂಡಿವೆ. ವಿಶೇಷವಾಗಿ ಶಾಲೆಗೆ ತೆರಳುವ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರು ಕಳವಳ ವ್ಯಕ್ತಪಡಿಸಿದ್ದು, ಬೆಳಗ್ಗೆ ಹಾಗೂ ಸಂಜೆ ವೇಳೆಯಲ್ಲಿ ಮಕ್ಕಳನ್ನು ಒಂಟಿಯಾಗಿ ಕಳುಹಿಸಲು ಆತಂಕ ಎದುರಿಸುತ್ತಿದೆ ಎಂದು ತಿಳಿಸಿದ್ದಾರೆ.


ಘಟನೆಗೆ ಸಂಬಂಧಿಸಿ ಸ್ಥಳೀಯರು ತಕ್ಷಣವೇ ಬೀದಿ ನಾಯಿಗಳನ್ನು ಹಿಡಿಯುವ ಕಾರ್ಯಾಚರಣೆ ನಡೆಸಬೇಕು ಹಾಗೂ ಅವುಗಳ ಸಂಖ್ಯೆಯನ್ನು ನಿಯಂತ್ರಿಸಲು ಸಂಬಂಧಿತ ಇಲಾಖೆಗಳು ಶಾಶ್ವತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಮತ್ತಷ್ಟು ಅನಾಹುತಗಳು ಸಂಭವಿಸುವ ಮುನ್ನವೇ ಅಧಿಕಾರಿಗಳು ಜಾನುವಾರುಗಳ ಹಾಗೂ ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಪರಿಣಾಮಕಾರಿ ಕ್ರಮ ಜರುಗಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

About the Author

Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Tags:

Post a Comment

0 Comments

Post a Comment (0)
3/related/default