ಕುಂದಾಪುರ: ತಾಲೂಕಿನ ಕೊರ್ಗಿ ಗ್ರಾಮದ ಮಣೂರುಮನೆ ಪ್ರದೇಶದ ಸರ್ಕಾರಿ ಹಾಡಿಯಲ್ಲಿ ಅಕ್ರಮವಾಗಿ ಕೋಳಿ ಅಂಕ ಜುಗಾರಿ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸರು ದಾಳಿ ನಡೆಸಿ ಐವರನ್ನು ಬಂಧಿಸಿದ್ದಾರೆ.
ಜುಲೈ 12ರಂದು ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಉಪನಿರೀಕ್ಷಕ ನಿರಂಜನ್ ಗೌಡ ಬಿ.ಎಸ್. ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ, ಕೋಳಿ ಅಂಕದಲ್ಲಿ ತೊಡಗಿದ್ದ ಮಂಜುನಾಥ್ (45) ತಲ್ಲೂರು, ಸುಕ್ಷಯ್ (29) ಮಣೂರು, ಶರಣ್ (27) ಬೇಳೂರು, ರಮೇಶ್ (32) ಕೊರ್ಗಿ ಹಾಗೂ ರಜತ್ (27) ಕೆದೂರು ಗ್ರಾಮದ ನಿವಾಸಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ದಾಳಿಯ ವೇಳೆ ಆರೋಪಿಗಳಿಂದ ₹1,600 ನಗದು, ಎರಡು ಜೀವಂತ ಕೋಳಿ ಹುಂಜಗಳು, ಒಂದು ಕೋಳಿ ಬಾಳು, ಕೋಳಿಗಳ ಕಾಲಿಗೆ ಕತ್ತಿ ಕಟ್ಟಲು ಬಳಸುತ್ತಿದ್ದ ಹಗ್ಗ, ಎರಡು ಬೀಣಿ ಕೈಚೀಲಗಳು, ಹೊಂಡಾ ಶೈನ್ ಬೈಕ್, ಕೆಂಪು ಬಣ್ಣದ ಸ್ಕೂಟಿ ಹಾಗೂ ಯಮಹಾ ಆರ್‌ಎಕ್ಸ್ ಮೋಟಾರ್‌ಸೈಕಲ್‌ನ್ನು ವಶಪಡಿಸಿಕೊಳ್ಳಲಾಗಿದೆ.
ಪ್ರಾಥಮಿಕ ತನಿಖೆಯಲ್ಲಿ ಆರೋಪಿಗಳು ಕೋಳಿಗಳಿಗೆ ಸಮರ್ಪಕವಾಗಿ ಆಹಾರ ಮತ್ತು ನೀರು ನೀಡದೆ ಹಿಂಸಿಸಿ, ಅವುಗಳ ಕಾಲಿಗೆ ಕತ್ತಿ ಕಟ್ಟಿ ಹಣ ಪಣಕ್ಕಿಟ್ಟು ಸಾರ್ವಜನಿಕ ಸ್ಥಳದಲ್ಲಿ ಕೋಳಿ ಅಂಕ ಜುಗಾರಿ ನಡೆಸುತ್ತಿದ್ದರೆಂಬುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
About the Author
Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.
📢 SUDDI LIVE WhatsApp Community
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.
📲 Join WhatsApp Community📢 SUDDI LIVE Facebook Page
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.
👍 Follow SUDDI LIVEನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

