ಉಡುಪಿ: ನಾಡದೋಣಿ ಮೀನುಗಾರಿಕೆಯಲ್ಲಿ ಸೀಮೆ ಎಣ್ಣೆಗೆ ಪರ್ಯಾಯವಾಗಿ ಎಲ್‌ಪಿಜಿ ಆಧಾರಿತ ಔಟ್‌ಬೋರ್ಡ್ ಎಂಜಿನ್‌ಗಳ ಬಳಕೆಯನ್ನು ಉತ್ತೇಜಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಗತ್ಯ ಸಹಕಾರ ಹಾಗೂ ಪ್ರೋತ್ಸಾಹ ನೀಡಬೇಕು ಎಂದು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಹೇಳಿದರು.
ಮಲ್ಪೆ ಮೀನುಗಾರರ ಸಂಘದ ಸಭಾಭವನದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಆಯೋಜಿಸಿದ್ದ ಎಲ್‌ಪಿಜಿ ಆಧಾರಿತ ಔಟ್‌ಬೋರ್ಡ್ ಎಂಜಿನ್ ಬಳಕೆಯ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನಾಡದೋಣಿ ಮೀನುಗಾರರಿಗೆ ಎಲ್‌ಪಿಜಿ ಆಧಾರಿತ ಎಂಜಿನ್ ಬಳಕೆಯ ಕುರಿತು ಮಾಹಿತಿ ನೀಡುವ ಮೂಲಕ ಮೀನುಗಾರಿಕೆಯ ಇಂಧನ ವೆಚ್ಚವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಯೋಜನೆಗೆ ಸಂಬಂಧಿಸಿದಂತೆ ಎಲ್‌ಪಿಜಿ ಕಿಟ್ ಅಳವಡಿಕೆಗೆ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಸಬ್ಸಿಡಿ ಒದಗಿಸುವಂತೆ ಕೇಂದ್ರ ಮೀನುಗಾರಿಕೆ ಮತ್ತು ಪೆಟ್ರೋಲಿಯಂ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಗುವುದು ಎಂದು ಶಾಸಕ ಸುವರ್ಣ ತಿಳಿಸಿದರು.
ನಾಡದೋಣಿ ಮೀನುಗಾರರ ಹಿತದೃಷ್ಟಿಯಿಂದ ರಾಜ್ಯ ಸರ್ಕಾರವೂ ಅಗತ್ಯ ಸಹಕಾರ ನೀಡಬೇಕು ಎಂಬ ಮನವಿಯನ್ನು ಮುಖ್ಯಮಂತ್ರಿ ಅವರಿಗೂ ಸಲ್ಲಿಸುವುದಾಗಿ ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ನಾರಾಯಣ ಕರ್ಕೇರ, ಮಲ್ಪೆ ನಾಡದೋಣಿ ಸಹಕಾರಿ ಸಂಘದ ಅಧ್ಯಕ್ಷ ಸುಂದರ ಸಾಲ್ಯಾನ್, ಬೈಂದೂರು ವಲಯದ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ಕುಮಾರ್ ಖಾರ್ವಿ, ಗಂಗೊಳ್ಳಿ ವಲಯದ ಯಶವಂತ ಖಾರ್ವಿ, ಬೇಸಿಗೆ ನಾಡದೋಣಿ ಸಂಘದ ಅಧ್ಯಕ್ಷ ಕೃಷ್ಣ, ಇಂಡೆನ್ ಗ್ಯಾಸ್ ಏಜೆನ್ಸಿಯ ದಿನೇಶ್ ಪುತ್ರನ್, ಮೀನುಗಾರಿಕಾ ಇಲಾಖೆಯ ಉಪ ನಿರ್ದೇಶಕಿ ಸವಿತಾ ಖಾದ್ರಿ, ಪುಣೆಯ ವನಾಜ್ ಇಂಜಿನಿಯರಿಂಗ್ ಸಂಸ್ಥೆಯ ಅಧಿಕಾರಿ ಮುರಳೀಧರ್, ಐಒಸಿಎಲ್ ಸಂಸ್ಥೆಯ ಹರ್ದೇವ್ ಸಿಂಗ್ ಸೇರಿದಂತೆ ಮೀನುಗಾರ ಮುಖಂಡರು ಉಪಸ್ಥಿತರಿದ್ದರು.
ಮೀನು ಮಾರಾಟ ಫೆಡರೇಶನ್ ನಿರ್ದೇಶಕ ರಾಮಚಂದ್ರ ಕುಂದರ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಮಟ್ಟು ಯತೀಶ್ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು.
About the Author
suddilive Suddilive.com covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.
📢 SUDDI LIVE WhatsApp Community
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.
📲 Join WhatsApp Community📢 SUDDI LIVE Facebook Page
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.
👍 Follow SUDDI LIVEನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

