ಮಲ್ಪೆ ಫಿಷರೀಸ್ ಶಾಲೆಯ ಆವರಣದಲ್ಲಿರುವ ಅಂಗನವಾಡಿ ಕೇಂದ್ರದ ಮೇಲ್ಛಾವಣಿಗೆ ಇತ್ತೀಚೆಗೆ ಸುರಿದ ಭಾರಿ ಗಾಳಿ ಮಳೆಯಿಂದಾಗಿ ಬೃಹತ್ ಮರ ಬಿದ್ದು ಹಾನಿಗೊಳಗಾಗಿದ್ದು, ಈ ಹಿನ್ನೆಲೆಯಲ್ಲಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅವರು ಅಧಿಕಾರಿಗಳೊಂದಿಗೆ ಜಂಟಿಯಾಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಘಟನಾ ಸ್ಥಳದಲ್ಲಿ ತಕ್ಷಣದ ಕ್ರಮ ಕೈಗೊಂಡ ಶಾಸಕರು, ಮಕ್ಕಳ ಸುರಕ್ಷತೆಗೆ ಮೊದಲ ಆದ್ಯತೆ ನೀಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಹಾನಿಗೊಳಗಾದ ಕಟ್ಟಡದಲ್ಲಿ ಸದ್ಯಕ್ಕೆ ಯಾವುದೇ ಚಟುವಟಿಕೆ ನಡೆಸದಂತೆ ತಿಳಿಸಿದ ಅವರು, ತಕ್ಷಣವೇ ಜಾರಿಗೆ ಬರುವಂತೆ ಅಂಗನವಾಡಿ ಕೇಂದ್ರವನ್ನು ತಾತ್ಕಾಲಿಕವಾಗಿ ಸ್ಥಳೀಯ ಪ್ರೌಢಶಾಲೆ ವಿಭಾಗದ ರಂಗಮಂದಿರಕ್ಕೆ ಸ್ಥಳಾಂತರಿಸಲು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ (CDPO) ಆದೇಶಿಸಿದರು.
ನೂತನ ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ ಪ್ರಸ್ತಾವನೆ:
ಅಂಗನವಾಡಿ ಕೇಂದ್ರಕ್ಕೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳ ಮೂಲಕ ಸೂಕ್ತ ನಿವೇಶನವನ್ನು ತಕ್ಷಣವೇ ಗುರುತಿಸಿ, ನೂತನ ಸುಸಜ್ಜಿತ ಅಂಗನವಾಡಿ ಕೇಂದ್ರದ ನಿರ್ಮಾಣಕ್ಕಾಗಿ ಶೀಘ್ರದಲ್ಲೇ ಸರ್ಕಾರಕ್ಕೆ ಸಮಗ್ರ ಪ್ರಸ್ತಾವನೆ ಸಲ್ಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಶಾಸಕರು ನಿರ್ದೇಶನ ನೀಡಿದರು.
ಈ ಪರಿಶೀಲನಾ ಸಂದರ್ಭದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರವೀಣ್ ಹೇರೂರು, ಮಾಜಿ ನಗರಸಭೆ ಸದಸ್ಯರಾದ ಎಡ್ಲಿನ್ ಕರ್ಕಡ, ಸುಂದರ ಕಲ್ಮಾಡಿ, ನಾರಾಯಣ ಕುಂದರ್ ಹಾಗೂ ಸ್ಥಳೀಯ ಪ್ರಮುಖರಾದ ಲಕ್ಷ್ಮೀಶ ಬಂಗೇರ, ವಿನಯ ಕುಮಾರ್, ಸುಶಾಂತ್, ಮಂಜು ಕೊಳ, ಸುರೇಶ್ ಕುಂದರ್, ಕೃಷ್ಣಪ್ಪ ಜತ್ತನ್, ನಿತಿನ್ ಪೂಜಾರಿ, ಸುಧಾಕರ ಕುಂದರ್, ವಿನೋದ್ ಹೊಸಕಟ್ಟ, ಅಂಗನವಾಡಿ ಕಾರ್ಯಕರ್ತೆ ರಾಧಿಕಾ ಕೋಟ್ಯಾನ್ ಮತ್ತು ಸಹಾಯಕಿ ರೇಣುಕಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.
About the Author
Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.
📢 SUDDI LIVE WhatsApp Community
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.
📲 Join WhatsApp Community📢 SUDDI LIVE Facebook Page
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.
👍 Follow SUDDI LIVEನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

