}

ಮಂಗಳೂರು ವಿವಿ ಪದವಿ ಫಲಿತಾಂಶ ಪ್ರಕಟ

suddilive.com
By -
0


ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯವು 2026ರ ಜೂನ್ ಮತ್ತು ಜುಲೈ ತಿಂಗಳಲ್ಲಿ ನಡೆಸಿದ ವಿವಿಧ ಪದವಿ ಕೋರ್ಸ್‌ಗಳ 6ನೇ ಹಾಗೂ 8ನೇ ಸೆಮಿಸ್ಟರ್‌ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸಿದೆ.


ಬಿ.ಎಸ್ಸಿ., ಬಿ.ಕಾಂ., ಬಿ.ಎನ್‌.ಡಬ್ಲ್ಯು., ಬಿ.ಸಿ.ಎ., ಬಿ.ಎಸ್ಸಿ. (ಎಫ್‌ಎನ್‌ಡಿ), ಬಿ.ಎಸ್ಸಿ. (ಎನಿಮೇಶನ್ ಮತ್ತು ವಿಜುವಲ್ ಎಫೆಕ್ಟ್ಸ್), ಬಿ.ಎಸ್ಸಿ. (ಫುಡ್ ಟೆಕ್ನಾಲಜಿ), ಬಿ.ಎಸ್ಸಿ. (ಹೋಂ ಸೈನ್ಸ್), ಬಿ.ಎ. (ಎಚ್‌ಆರ್‌ಡಿ), ಬಿ.ಎಸ್ಸಿ. (ಫ್ಯಾಶನ್ ಡಿಸೈನ್), ಬಿ.ಎಸ್ಸಿ. (ಐಡಿ ಆ್ಯಂಡ್ ಡಿ), ಬಿ.ಎಸ್ಸಿ. (ಎಚ್‌.ಎಸ್‌.) ಹಾಗೂ ಬಿ.ವಿ.ಎ. ಸೇರಿದಂತೆ ವಿವಿಧ ಕೋರ್ಸ್‌ಗಳ 6ನೇ ಸೆಮಿಸ್ಟರ್ ಮತ್ತು ಬಿ.ಎಚ್‌.ಎಂ. ಕಾರ್ಯಕ್ರಮದ 7ನೇ ಸೆಮಿಸ್ಟರ್‌ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸಲಾಗಿದೆ.


ಈ ಪರೀಕ್ಷೆಗಳಿಗೆ ಒಟ್ಟು 17,347 ವಿದ್ಯಾರ್ಥಿಗಳು ಹಾಜರಾಗಿದ್ದರು. ಮೌಲ್ಯಮಾಪನ ಪೂರ್ಣಗೊಂಡ ಬಳಿಕ ಆಂತರಿಕ ಮತ್ತು ಪ್ರಾಯೋಗಿಕ ಅಂಕಗಳು ಹಾಗೂ ಅನ್ವಯಿಸುವ ಅನುಕಂಪದ ಅಂಕಗಳನ್ನು ಪರಿಶೀಲಿಸಿ, 13,286 ವಿದ್ಯಾರ್ಥಿಗಳ ಫಲಿತಾಂಶವನ್ನು ಜುಲೈ 20ರಂದು ಪ್ರಕಟಿಸಲಾಗಿದೆ. ವಿದ್ಯಾರ್ಥಿಗಳು ತಮ್ಮ ಯುಯುಸಿಎಂಎಸ್‌ ಲಾಗಿನ್‌ ಐಡಿ ಬಳಸಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.


ಇನ್ನು ಬಿ.ಎ. (ಎಸ್‌ಎಲ್‌ಪಿ) 8ನೇ ಸೆಮಿಸ್ಟರ್‌, ಬಿ.ಎ./ಬಿ.ಬಿ.ಎ. 6ನೇ ಸೆಮಿಸ್ಟರ್‌ ಸೇರಿದಂತೆ ಉಳಿದ ಕೋರ್ಸ್‌ಗಳ ಫಲಿತಾಂಶವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು. ಇದರೊಂದಿಗೆ ಎಲ್ಲ ಪದವಿಗಳ 2ನೇ ಮತ್ತು 4ನೇ ಸೆಮಿಸ್ಟರ್‌ಗಳ ಹಾಗೂ ನಾನ್‌-ಎನ್‌ಇಪಿ ಕೋರ್ಸ್‌ಗಳ ಪುನರಾವರ್ತಿತ ವಿದ್ಯಾರ್ಥಿಗಳ ಫಲಿತಾಂಶವೂ ಮುಂದಿನ ದಿನಗಳಲ್ಲಿ ಹೊರಬೀಳಲಿದೆ ಎಂದು ವಿಶ್ವವಿದ್ಯಾನಿಲಯ ತಿಳಿಸಿದೆ.


ಈ ಬಾರಿ ಮಂಗಳೂರು ವಿಶ್ವವಿದ್ಯಾನಿಲಯವು ಮೌಲ್ಯಮಾಪನ ಕೇಂದ್ರಗಳಲ್ಲಿಯೇ ಅಂಕಗಳನ್ನು ಆನ್‌ಲೈನ್‌ ಮೂಲಕ ದಾಖಲಿಸುವ ವ್ಯವಸ್ಥೆಯನ್ನು ಸಂಪೂರ್ಣವಾಗಿ ಗಣಕೀಕರಣಗೊಳಿಸಿದೆ. ಇದರಿಂದ ಮೌಲ್ಯಮಾಪನ ಪ್ರಕ್ರಿಯೆ ನಡೆಯುತ್ತಿರುವ ಸಂದರ್ಭದಲ್ಲಿಯೇ ಅಂಕಗಳ ದಾಖಲಾತಿ ಕಾರ್ಯ ಪೂರ್ಣಗೊಳಿಸಿ, ಫಲಿತಾಂಶವನ್ನು ತ್ವರಿತವಾಗಿ ಪ್ರಕಟಿಸಲು ಸಾಧ್ಯವಾಗಿದೆ.


ಉಳಿದ ಎಲ್ಲ ಫಲಿತಾಂಶಗಳು ಪ್ರಕಟವಾದ ಬಳಿಕ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ಅವಕಾಶ ನೀಡಲಾಗುತ್ತದೆ. ಈ ಕುರಿತು ಶೀಘ್ರದಲ್ಲೇ ಯುಯುಸಿಎಂಎಸ್‌ ಪೋರ್ಟಲ್‌ನಲ್ಲಿ ವಿಶ್ವವಿದ್ಯಾನಿಲಯದಿಂದ ಪ್ರಕಟಣೆ ಹೊರಡಿಸಲಾಗುವುದು. ವಿದ್ಯಾರ್ಥಿಗಳು ನಿಗದಿತ ಶುಲ್ಕ ಪಾವತಿಸಿ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರು (ಪರೀಕ್ಷಾಂಗ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


About the Author

Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Tags:

Post a Comment

0 Comments

Post a Comment (0)
3/related/default