ಉಡುಪಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಹಾಗೂ ದೆಹಲಿಯಲ್ಲಿ ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ನಡೆದ ಲಾಠಿಚಾರ್ಜ್ ಖಂಡಿಸಿ ವಿದ್ಯಾರ್ಥಿಗಳು ಮಣಿಪಾಲದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ಮಣಿಪಾಲದ ಕಾಯಿನ್ ಸರ್ಕಲ್‌ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ವಿದ್ಯಾರ್ಥಿಗಳು ಕಾಲ್ನಡಿಗೆ ಜಾಥಾ ನಡೆಸಿದರು. ಈ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು, ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ವಿದ್ಯಾರ್ಥಿ ಮುಖಂಡರು, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಿಂದ ದೇಶದಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಆತಂಕಕ್ಕೆ ಸಿಲುಕಿದೆ ಎಂದು ಆರೋಪಿಸಿದರು. ಈ ಪ್ರಕರಣದಿಂದ ಮನನೊಂದು ಕೆಲ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿರುವುದು ನೋವಿನ ಸಂಗತಿ. ಮೃತ ವಿದ್ಯಾರ್ಥಿಗಳ ಕುಟುಂಬಗಳಿಗೆ ನ್ಯಾಯ ದೊರಕಿಸಿಕೊಡಬೇಕು ಹಾಗೂ ಪ್ರಕರಣಕ್ಕೆ ಕಾರಣರಾದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಪ್ರಕರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು ಎಂಬ ಆಗ್ರಹವೂ ಪ್ರತಿಭಟನೆಯಲ್ಲಿ ಕೇಳಿಬಂತು.
ಇದೇ ವೇಳೆ, ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಗಳ ಸ್ಮರಣಾರ್ಥ ಪ್ರತಿಭಟನಾಕಾರರು ಮೌನ ಪ್ರಾರ್ಥನೆ ಸಲ್ಲಿಸಿ ಶ್ರದ್ಧಾಂಜಲಿ ಅರ್ಪಿಸಿದರು.
ಪ್ರತಿಭಟನೆಗೆ ಯುವ ಕಾಂಗ್ರೆಸ್ ಹಾಗೂ ಸಹಬಾಳ್ವೆ ಸಂಘಟನೆ ಬೆಂಬಲ ನೀಡಿತು. ಯುವ ಕಾಂಗ್ರೆಸ್ ಮುಖಂಡ ವಿಶ್ವಾಸ್ ಅಮೀನ್, ಸಹಬಾಳ್ವೆ ಸಂಘಟನೆಯ ಫಣಿರಾಜ್ ಸೇರಿದಂತೆ ಹಲವು ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡು ವಿದ್ಯಾರ್ಥಿಗಳ ಬೇಡಿಕೆಗಳಿಗೆ ಬೆಂಬಲ ಸೂಚಿಸಿದರು.
ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
About the Author
suddilive Suddilive.com covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.
📢 SUDDI LIVE WhatsApp Community
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.
📲 Join WhatsApp Community📢 SUDDI LIVE Facebook Page
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.
👍 Follow SUDDI LIVEನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

