}

ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ? ಧರ್ಮೇಂದ್ರ ಪ್ರಧಾನ್ ರಾಜೀನಾಮೆ

suddilive.com
By -
0


ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ನಡೆಯುತ್ತಿದ್ದ ವಿದ್ಯಾರ್ಥಿಗಳ ಪ್ರತಿಭಟನೆಗೆ ಕೊನೆಗೂ ಫಲ ಸಿಕ್ಕಿದೆ ಎನ್ನಲಾಗುತ್ತಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ.


ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳನ್ನು ಖಂಡಿಸಿ ದೇಶದಾದ್ಯಂತ ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಕಾಂಗ್ರೆಸ್ ಸೇರಿದಂತೆ ಹಲವು ವಿರೋಧ ಪಕ್ಷಗಳು ಕೂಡ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿದ್ದವು. ದೆಹಲಿಯ ಜಂತರ್-ಮಂತರ್‌ನಲ್ಲಿ ವಿದ್ಯಾರ್ಥಿಗಳು ನಿರಂತರ ಪ್ರತಿಭಟನೆ ನಡೆಸಿ, ಸಚಿವರ ರಾಜೀನಾಮೆಯನ್ನು ಆಗ್ರಹಿಸಿದ್ದರು.


ಈ ಬೆಳವಣಿಗೆಗಳ ನಡುವೆಯೇ ಕೇಂದ್ರ ಸರ್ಕಾರ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯನ್ನು ಸ್ವೀಕರಿಸಿದೆ ಎಂದು ವರದಿಯಾಗಿದೆ. ಪ್ರಧಾನಿ ನರೇಂದ್ರ ಮೋದಿಗೆ ಉದ್ದೇಶಿಸಿ ಬರೆದಿರುವ ತಮ್ಮ ರಾಜೀನಾಮೆ ಪತ್ರದಲ್ಲಿ, "ದೇಶದ ಪ್ರಗತಿಗೆ ಅಡ್ಡಿಯಾಗುವಂತಹ ಪರಿಸ್ಥಿತಿಯನ್ನು ರಾಷ್ಟ್ರವಿರೋಧಿ ಶಕ್ತಿಗಳು ದುರುಪಯೋಗಪಡಿಸಿಕೊಳ್ಳಬಾರದು. ದೇಶದ ಏಕತೆ ಮತ್ತು ಸಮಗ್ರತೆ ಅಬಾಧಿತವಾಗಿರಬೇಕು. ವಿದ್ಯಾರ್ಥಿಗಳ ಭವಿಷ್ಯ ಕಾನೂನು ತೊಡಕುಗಳಲ್ಲಿ ಸಿಲುಕದೇ, ಅವರು ತಮ್ಮ ಶಿಕ್ಷಣ ಹಾಗೂ ವೃತ್ತಿಜೀವನದತ್ತ ಗಮನಹರಿಸುವಂತಾಗಬೇಕು. ಈ ಎಲ್ಲ ವಿಚಾರಗಳನ್ನು ಪರಿಗಣಿಸಿ ನಾನು ನನ್ನ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ" ಎಂದು ಅವರು ಉಲ್ಲೇಖಿಸಿದ್ದಾರೆ.



About the Author

Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Tags:

Post a Comment

0 Comments

Post a Comment (0)
3/related/default