}

NEET ಪ್ರತಿಭಟನೆ: ವಿವಾದಾತ್ಮಕ ಬರಹ ಹಂಚಿಕೆ ಆರೋಪ; ಬಂಟ್ವಾಳದ ವ್ಯಕ್ತಿ ಬಂಧನ

suddilive.com
By -
0


ವಿಟ್ಲ:NEET ಪ್ರತಿಭಟನೆಗೆ ಸಂಬಂಧಿಸಿದಂತೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಹಾಗೂ ವಿವಿಧ ಸಮುದಾಯಗಳ ನಡುವೆ ದ್ವೇಷ ಮತ್ತು ವೈಮನಸ್ಸು ಉಂಟುಮಾಡುವ ರೀತಿಯ ಬರಹವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಆರೋಪದ ಮೇಲೆ ಬಂಟ್ವಾಳ ತಾಲೂಕಿನ ವ್ಯಕ್ತಿಯೊಬ್ಬರನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.


ಬಂಧಿತನನ್ನು ಬಂಟ್ವಾಳದ ಕೇಪು ನಿವಾಸಿ ಭರತ್ (36) ಎಂದು ಗುರುತಿಸಲಾಗಿದೆ.


ಪೊಲೀಸರಿಗೆ ನೀಡಿರುವ ದೂರಿನ ಪ್ರಕಾರ, ದೂರುದಾರರು ‘KFC KHANDIGA’ ಎಂಬ ವಾಟ್ಸಾಪ್ ಗುಂಪಿನ ಸದಸ್ಯರಾಗಿದ್ದಾರೆ. ಜುಲೈ 23ರಂದು ಈ ಗುಂಪಿನಲ್ಲಿ ಹರಿದಾಡಿದ್ದ ಸ್ಕ್ರೀನ್‌ಶಾಟ್‌ವೊಂದನ್ನು ಪರಿಶೀಲಿಸಿದಾಗ, ಅದರಲ್ಲಿ ಸಮುದಾಯಗಳ ನಡುವೆ ದ್ವೇಷ ಮತ್ತು ವೈಮನಸ್ಸು ಮೂಡಿಸುವುದರ ಜತೆಗೆ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವಂತಹ ಬರಹವಿರುವುದು ಗಮನಕ್ಕೆ ಬಂದಿದೆ ಎನ್ನಲಾಗಿದೆ.


ಬಳಿಕ ಈ ಕುರಿತು ಪರಿಶೀಲನೆ ನಡೆಸಿದಾಗ, ಇದೇ ಬರಹವನ್ನು ಭರತ್ ತನ್ನ ವಾಟ್ಸಾಪ್ ಸ್ಟೇಟಸ್‌ನಲ್ಲಿ ಹಂಚಿಕೊಂಡಿರುವುದು ಪತ್ತೆಯಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.


ಈ ಹಿನ್ನೆಲೆಯಲ್ಲಿ ನೀಡಲಾದ ದೂರಿನ ಆಧಾರದ ಮೇಲೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 160/2026 ದಾಖಲಿಸಲಾಗಿದೆ. ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 197(1)(a), 197(1)(c) ಹಾಗೂ 353(2)ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ.


ತನಿಖೆಯ ಮುಂದುವರಿದ ಭಾಗವಾಗಿ ಆರೋಪಿತ ಭರತ್‌ನನ್ನು ಪೊಲೀಸರು ಬಂಧಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

About the Author

Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Tags:

Post a Comment

0 Comments

Post a Comment (0)
3/related/default