ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 1ರಂದು ಮೈಸೂರಿಗೆ ಭೇಟಿ ನೀಡಲಿದ್ದು, ರಾಮಕೃಷ್ಣ ಆಶ್ರಮದ ಆವರಣದಲ್ಲಿ ನಿರ್ಮಿಸಲಾಗಿರುವ ‘ವಿವೇಕ ಸ್ಮಾರಕ’ವನ್ನು ಲೋಕಾರ್ಪಣೆ ಮಾಡಲಿದ್ದಾರೆ. ಪ್ರಧಾನಿಯವರ ಭೇಟಿಯ ಹಿನ್ನೆಲೆಯಲ್ಲಿ ನಗರದಲ್ಲಿ ಭದ್ರತೆ ಮತ್ತು ಸಂಚಾರ ವ್ಯವಸ್ಥೆಯನ್ನು ಬಿಗಿಗೊಳಿಸಲು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಸಿದ್ಧತೆ ನಡೆಸಿವೆ.
ನಿಗದಿತ ಕಾರ್ಯಕ್ರಮದಂತೆ ಪ್ರಧಾನಿ ಮೋದಿ ಅವರು ಮಧ್ಯಾಹ್ನ 2.55ಕ್ಕೆ ವಿಶೇಷ ವಿಮಾನದ ಮೂಲಕ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ನಂತರ ವಿಶೇಷ ಹೆಲಿಕಾಪ್ಟರ್‌ನಲ್ಲಿ ಓವಲ್ ಮೈದಾನಕ್ಕೆ ತೆರಳಲಿದ್ದು, ಬಳಿಕ ರಸ್ತೆ ಮಾರ್ಗವಾಗಿ ರಾಮಕೃಷ್ಣ ಆಶ್ರಮಕ್ಕೆ ಪ್ರಯಾಣಿಸಲಿದ್ದಾರೆ.
ಮಧ್ಯಾಹ್ನ 3.30ರಿಂದ ಸಂಜೆ 5.15ರವರೆಗೆ ರಾಮಕೃಷ್ಣ ಆಶ್ರಮದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಪ್ರಧಾನಿ, ‘ವಿವೇಕ ಸ್ಮಾರಕ’ವನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಇದೇ ವೇಳೆ ಆಶ್ರಮದ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳು ಹಾಗೂ ಆಶ್ರಮದ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸುವ ಸಾಧ್ಯತೆಯೂ ಇದೆ.
ಕಾರ್ಯಕ್ರಮ ಮುಗಿದ ಬಳಿಕ ಸಂಜೆ 5.30ರ ಸುಮಾರಿಗೆ ಓವಲ್ ಮೈದಾನಕ್ಕೆ ಮರಳಲಿರುವ ಪ್ರಧಾನಿ ಮೋದಿ, ಅಲ್ಲಿಂದ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ತೆರಳಿ ಸಂಜೆ 5.55ಕ್ಕೆ ವಿಶೇಷ ವಿಮಾನದ ಮೂಲಕ ನವದೆಹಲಿಗೆ ವಾಪಸಾಗಲಿದ್ದಾರೆ.
ಪ್ರಧಾನಿಯವರ ಮೈಸೂರು ಭೇಟಿಯ ಹಿನ್ನೆಲೆಯಲ್ಲಿ ನಗರದಾದ್ಯಂತ ವ್ಯಾಪಕ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗುತ್ತಿದೆ. ಪ್ರಧಾನಿಯವರ ಸಂಚಾರದ ಸಮಯದಲ್ಲಿ ಕೆಲ ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿರ್ಬಂಧ ಅಥವಾ ಮಾರ್ಗ ಬದಲಾವಣೆ ಜಾರಿಗೊಳಿಸುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತದ ಸೂಚನೆಗಳನ್ನು ಪಾಲಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
About the Author
Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.
📢 SUDDI LIVE WhatsApp Community
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.
📲 Join WhatsApp Community📢 SUDDI LIVE Facebook Page
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.
👍 Follow SUDDI LIVEನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

