}

ಹಿಂದೂಪರ ಹೋರಾಟಗಾರ ಪುನೀತ್ ಕೆರೆಹಳ್ಳಿ ಬಂಧನ; ಮುಸ್ಲಿಂ ಧರ್ಮಗುರುಗಳಿಗೆ ಅವಮಾನ ಆರೋಪ

suddilive.com
By -
0

Hindutva activist Puneeth Kerehalli arrested by Kumaraswamy Layout Police over alleged remarks against Muslim religious leaders

ಬೆಂಗಳೂರು: ಮುಸ್ಲಿಂ ಧರ್ಮಗುರುಗಳಿಗೆ ಅವಮಾನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಹಿಂದೂಪರ ಹೋರಾಟಗಾರ ಪುನೀತ್ ಕೆರೆಹಳ್ಳಿಯನ್ನು ಕುಮಾರಸ್ವಾಮಿ ಲೇಔಟ್ ಠಾಣೆ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.


ಪೊಲೀಸರ ಮಾಹಿತಿ ಪ್ರಕಾರ, ಮುಸ್ಲಿಂ ಧರ್ಮಗುರುಗಳ ಕುರಿತು ಅವಹೇಳನಕಾರಿ ಹೇಳಿಕೆಗಳನ್ನು ನೀಡಲಾಗಿದೆ ಎಂದು ಆರೋಪಿಸಿ ಅಬ್ದುಲ್ ರಜಾಕ್ ಎಂಬವರು ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದರು.


ತನಿಖೆಯ ಭಾಗವಾಗಿ, ಹಾಸನ ಜಿಲ್ಲೆಯ ಆಲೂರು ತಾಲೂಕಿನ ಕೆರೆಹಳ್ಳಿ ಗ್ರಾಮದಲ್ಲಿರುವ ಪುನೀತ್ ಕೆರೆಹಳ್ಳಿಯವರ ನಿವಾಸಕ್ಕೆ ತೆರಳಿದ ಪೊಲೀಸರು ಅವರನ್ನು ವಶಕ್ಕೆ ಪಡೆದು ಬಳಿಕ ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದಾರೆ.


 ಬಂಧನದ ವೇಳೆ ಸರ್ಕಾರದ ವಿರುದ್ಧ ಆರೋಪ


ಬಂಧನದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಪುನೀತ್ ಕೆರೆಹಳ್ಳಿ, ತಮ್ಮ ವಿರುದ್ಧ ರಾಜಕೀಯ ಪ್ರೇರಿತ ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಪಿಸಿದರು.


"ನನಗೆ ಜೀವ ಬೆದರಿಕೆ ಇರುವ ಬಗ್ಗೆ ನಾನು ಈಗಾಗಲೇ ಅಬ್ದುಲ್ ರಜಾಕ್ ವಿರುದ್ಧ ದೂರು ನೀಡಿದ್ದೇನೆ. ಆದರೆ ನನ್ನ ದೂರಿನ ಬಗ್ಗೆ ಕ್ರಮ ಕೈಗೊಳ್ಳದೆ ನನ್ನನ್ನೇ ಬಂಧಿಸಲಾಗಿದೆ. ಇದು ಅಧಿಕಾರದ ದುರ್ಬಳಕೆಯಾಗಿದೆ. ನನ್ನ ವಿರುದ್ಧ ಷಡ್ಯಂತ್ರ ರೂಪಿಸಲಾಗಿದೆ" ಎಂದು ಅವರು ಆರೋಪಿಸಿದ್ದಾರೆ.



About the Author

Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Tags:

Post a Comment

0 Comments

Post a Comment (0)
3/related/default