}

ಪ್ರಾಣೇಶ್‌ ಎಂಎಲ್‌ಸಿ ಆಯ್ಕೆ ರದ್ದು ಮಾಡಿದ ಸುಪ್ರೀಂ ಕೋರ್ಟ್‌: ಗಾಯತ್ರಿ ಶಾಂತೇಗೌಡಗೆ ಜಯ

suddilive.com
By -
0


ಬೆಂಗಳೂರು: ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ. ಪ್ರಾಣೇಶ್ ಅವರಿಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ. ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದ ಅವರ ಸದಸ್ಯತ್ವವನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿ ಮಹತ್ವದ ತೀರ್ಪು ನೀಡಿದೆ.


ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಚುನಾವಣೆಯಲ್ಲಿ ಎಂ.ಕೆ. ಪ್ರಾಣೇಶ್ ಅವರು ಕೇವಲ ಆರು ಮತಗಳ ಅಂತರದಿಂದ ಜಯಗಳಿಸಿದ್ದರು. ಆದರೆ, ಈ ಫಲಿತಾಂಶವನ್ನು ಪ್ರಶ್ನಿಸಿ ಪರಾಜಿತ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ಅವರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.


ಚುನಾವಣೆಯಲ್ಲಿ ನಾಮನಿರ್ದೇಶಿತ ಸದಸ್ಯರು ಮತ ಚಲಾಯಿಸಿರುವುದು ಕಾನೂನುಬಾಹಿರ ಎಂದು ವಾದಿಸಿದ್ದ ಗಾಯತ್ರಿ ಶಾಂತೇಗೌಡ ಅವರು ಕಳೆದ ಮೂರೂವರೆ ವರ್ಷಗಳಿಂದ ನ್ಯಾಯಾಂಗ ಹೋರಾಟ ನಡೆಸುತ್ತಿದ್ದರು.


ಪ್ರಕರಣದ ಸುದೀರ್ಘ ವಿಚಾರಣೆ ಪೂರ್ಣಗೊಂಡ ಬಳಿಕ ಸುಪ್ರೀಂಕೋರ್ಟ್ ಗುರುವಾರ ತನ್ನ ಅಂತಿಮ ತೀರ್ಪು ಪ್ರಕಟಿಸಿದ್ದು, ಗಾಯತ್ರಿ ಶಾಂತೇಗೌಡ ಅವರ ವಾದವನ್ನು ಮಾನ್ಯಗೊಳಿಸಿದೆ. ಇದರೊಂದಿಗೆ ಎಂ.ಕೆ. ಪ್ರಾಣೇಶ್ ಅವರ ವಿಧಾನ ಪರಿಷತ್ ಸದಸ್ಯತ್ವ ರದ್ದಾಗಿದ್ದು, ಉಳಿದಿರುವ ಸುಮಾರು ಒಂದೂವರೆ ವರ್ಷದ ಅವಧಿಗೆ ಗಾಯತ್ರಿ ಶಾಂತೇಗೌಡ ಅವರು ವಿಧಾನ ಪರಿಷತ್ ಸದಸ್ಯರಾಗಿ ಅಧಿಕಾರ ವಹಿಸಲಿದ್ದಾರೆ.



About the Author

Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Post a Comment

0 Comments

Post a Comment (0)
3/related/default