ಉಡುಪಿ: NEET ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಹಾಗೂ ದೆಹಲಿಯಲ್ಲಿ ಎಐಸಿಸಿ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ನಡೆದ ಪೊಲೀಸ್ ಕ್ರಮವನ್ನು ವಿರೋಧಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಮಂಗಳವಾರ ಬ್ರಹ್ಮಗಿರಿ ಸರ್ಕಲ್‌ನಲ್ಲಿ ರಸ್ತೆ ತಡೆ ಪ್ರತಿಭಟನೆ ನಡೆಯಿತು.
ಬ್ರಹ್ಮಗಿರಿ ಸರ್ಕಲ್‌ನಲ್ಲಿ ಜಮಾಯಿಸಿದ ಕಾಂಗ್ರೆಸ್ ಮುಖಂಡರು ಮತ್ತು ನೂರಾರು ಕಾರ್ಯಕರ್ತರು ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. NEET ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಿಂದ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗಿದ್ದು, ಈ ವಿಚಾರದಲ್ಲಿ ಕೇಂದ್ರ ಶಿಕ್ಷಣ ಸಚಿವಾಲಯ ಸೂಕ್ತ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಪ್ರತಿಭಟನಾಕಾರರು ಕೆಲಕಾಲ ರಸ್ತೆ ತಡೆ ನಡೆಸಿದ ಪರಿಣಾಮ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಈ ವೇಳೆ ಸ್ಥಳದಲ್ಲಿದ್ದ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಕೆಲಕಾಲ ಮಾತಿನ ಚಕಮಕಿ ನಡೆಯಿತು. ಬಳಿಕ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು.
ರಸ್ತೆ ತಡೆ ನಡೆಸುತ್ತಿದ್ದ ಪ್ರಮುಖ ಕಾಂಗ್ರೆಸ್ ಮುಖಂಡರು ಸೇರಿದಂತೆ ಹಲವು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ಸ್ಥಳದಿಂದ ಕರೆದೊಯ್ದರು.
About the Author
Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.
📢 SUDDI LIVE WhatsApp Community
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.
📲 Join WhatsApp Community📢 SUDDI LIVE Facebook Page
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.
👍 Follow SUDDI LIVEನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

