ಉಡುಪಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದ್ವೇಷ ಭಾಷಣ ಹಾಗೂ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳವಾರ ಉಡುಪಿ ನಗರದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ್ದ ಯಶ್‌ಪಾಲ್ ಸುವರ್ಣ, ಬಾಬರಿ ಮಸೀದಿಯನ್ನು ಧ್ವಂಸ ಮಾಡಿದ ರೀತಿಯಲ್ಲೇ ರಾಹುಲ್ ಗಾಂಧಿ ಅವರ ವಂಶವನ್ನು ಧ್ವಂಸ ಮಾಡುವುದಾಗಿ ಹೇಳಿಕೆ ನೀಡಿದ್ದರು ಎಂದು ಆರೋಪಿಸಲಾಗಿದೆ. ಇದರ ಜೊತೆಗೆ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎನ್ನಲಾಗಿದ್ದು, ಈ ಹೇಳಿಕೆಗಳು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದವು.
ಈ ಹಿನ್ನೆಲೆಯಲ್ಲಿ ಮಂಗಳವಾರ ತಡರಾತ್ರಿ ಕಾಂಗ್ರೆಸ್ ಮುಖಂಡರು ಉಡುಪಿ ನಗರ ಪೊಲೀಸ್ ಠಾಣೆಗೆ ತೆರಳಿ ದೂರು ಸಲ್ಲಿಸಿದರು. ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ನೀಡಿದ ದೂರಿನ ಆಧಾರದ ಮೇಲೆ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಬಿಎನ್‌ಎಸ್‌ನ ಕಲಂ 57, 192, 196(2), 352, 353(2) ಮತ್ತು 351(2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ದೂರು ಸಲ್ಲಿಸುವ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಪ್ರಸಾದ್ ರಾಜ್ ಕಾಂಚನ್, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ವಕೀಲರಾದ ಹಬೀಬ್ ಅಲಿ, ಹರೀಶ್ ಪಾಂಗಾಳ ಸೇರಿದಂತೆ ಹಲವರು ಉಪಸ್ಥಿತರಿದ್ದರು.
About the Author
Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.
📢 SUDDI LIVE WhatsApp Community
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.
📲 Join WhatsApp Community📢 SUDDI LIVE Facebook Page
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.
👍 Follow SUDDI LIVEನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

