}

ಉಡುಪಿ: ಎಸ್‌ಐಆರ್‌ ಅರ್ಜಿಗಳನ್ನು ತ್ವರಿತವಾಗಿ ಮತಗಟ್ಟೆ ಅಧಿಕಾರಿಗಳಿಗೆ ನೀಡಿ: ಜಿಲ್ಲಾಧಿಕಾರಿ ಸ್ವರೂಪಾ

suddilive.com
By -
0


ಉಡುಪಿ: ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯ ಅಂತಿಮ ಹಂತ ತಲುಪಿದ್ದು, ಮನೆ ಮನೆಗೆ ವಿತರಿಸಲಾದ ಎನ್ಯೂಮರೇಶನ್‌  ನಮೂನೆಗಳನ್ನು  ಶೀಘ್ರವೇ ಭರ್ತಿ ಮಾಡಿ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ (ಬಿಎಲ್‌ಒ) ಹಿಂತಿರುಗಿಸುವಂತೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಮನವಿ ಮಾಡಿದ್ದಾರೆ.


ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ  ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಾದ್ಯಂತ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಸುಸೂತ್ರವಾಗಿ ಸಾಗುತ್ತಿದೆ ಎಂದು ತಿಳಿಸಿದರು.


ಜುಲೈ 14ರ ತನಕ ಜಿಲ್ಲೆಯ ಒಟ್ಟು 10,63,876 ಮತದಾರರಲ್ಲಿ 10,63,451 ಮಂದಿಗೆ ಎನ್ಯೂಮರೇಶನ್‌ ಫಾರ್ಮ್‌ಗಳನ್ನು ವಿತರಿಸಲಾಗಿದ್ದು, ಶೇ. 99.97ರಷ್ಟು ಪ್ರಗತಿ ಸಾಧಿಸಲಾಗಿದೆ. ಇದುವರೆಗೆ 3,22,027 ಗಣತಿ ನಮೂನೆಗಳನ್ನು ಡಿಜಿಟಲೀಕರಣಗೊಳಿಸಲಾಗಿದ್ದು, ಶೇ. 30.27ರಷ್ಟು ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ಅವರು ಮಾಹಿತಿ ನೀಡಿದರು.


ಮನೆ ಮನೆಗೆ ಭೇಟಿ ನೀಡುವ ವೇಳೆ 1,647 ಮತದಾರರು ಮೃತಪಟ್ಟಿರುವುದು, 1,166 ಮಂದಿ ಶಾಶ್ವತವಾಗಿ ಬೇರೆಡೆಗೆ ಸ್ಥಳಾಂತರಗೊಂಡಿರುವುದು ಹಾಗೂ 396 ಮಂದಿ ಸ್ವಯಂ ದಾಖಲಾತಿ ಮಾಡಿಕೊಂಡಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ ಎಂದರು.


ಬೈಂದೂರು, ಕುಂದಾಪುರ, ಕಾಪು ಮತ್ತು ಕಾರ್ಕಳ ವಿಧಾನಸಭಾ ಕ್ಷೇತ್ರಗಳಲ್ಲಿ ಶೇ.100ರಷ್ಟು ಎನ್ಯೂಮರೇಶನ್‌ ಫಾರ್ಮ್‌ಗಳ ವಿತರಣೆ ಪೂರ್ಣಗೊಂಡಿದೆ. ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಮಾತ್ರ ಇನ್ನೂ 425 ಫಾರ್ಮ್‌ಗಳ ವಿತರಣೆ ಬಾಕಿಯಿದ್ದು, ಅದನ್ನೂ ಶೀಘ್ರ ಪೂರ್ಣಗೊಳಿಸುವ ಜವಾಬ್ದಾರಿ ಬಿಎಲ್‌ಒಗಳು ಮತ್ತು ಬಿಎಲ್‌ಎಗಳ ಮೇಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.


ಜಿಲ್ಲೆಯಲ್ಲಿ ಪಾರದರ್ಶಕ, ನಿಖರ ಹಾಗೂ ದೋಷರಹಿತ ಮತದಾರರ ಪಟ್ಟಿಯನ್ನು ಸಿದ್ಧಪಡಿಸಲು ಎಲ್ಲ ರಾಜಕೀಯ ಪಕ್ಷಗಳು ಸಹಕಾರ ನೀಡಬೇಕು ಎಂದು ಅವರು ಮನವಿ ಮಾಡಿದರು.


ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಜಿಲ್ಲಾ ಚುನಾವಣಾಧಿಕಾರಿ ಕಚೇರಿಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಮತ್ತು ಪ್ರತಿನಿಧಿಗಳು ಉಪಸ್ಥಿತರಿದ್ದರು.

About the Author

Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Tags:

Post a Comment

0 Comments

Post a Comment (0)
3/related/default