}

ಉಡುಪಿ: ದ್ವೇಷ ಭಾಷಣ ಪ್ರಕರಣ – ಪೊಲೀಸ್ ಠಾಣೆಗೆ ಹಾಜರಾದ ಶಾಸಕ ಯಶ್ ಪಾಲ್ ಸುವರ್ಣ, ಒಂದು ಗಂಟೆ ವಿಚಾರಣೆ

suddilive.com
By -
0

 


ಉಡುಪಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ದಾಖಲಾಗಿರುವ ದ್ವೇಷ ಭಾಷಣ ಪ್ರಕರಣದ ಹಿನ್ನೆಲೆಯಲ್ಲಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅವರು ಗುರುವಾರ ರಾತ್ರಿ ಉಡುಪಿ ನಗರ ಪೊಲೀಸ್ ಠಾಣೆಗೆ ಹಾಜರಾಗಿ ವಿಚಾರಣೆಗೆ ಒಳಗಾದರು.


ಕಳೆದ ಮಂಗಳವಾರ ಉಡುಪಿ ಜಿಲ್ಲಾ ಬಿಜೆಪಿ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಶಾಸಕ ಯಶ್ ಪಾಲ್ ಸುವರ್ಣ ಅವರು ರಾಹುಲ್ ಗಾಂಧಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಕುರಿತು ಕಾಂಗ್ರೆಸ್ ಉಡುಪಿ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ನೀಡಿದ ದೂರಿನ ಆಧಾರದ ಮೇಲೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.


ಪ್ರಕರಣ ಸಂಬಂಧ ಪೊಲೀಸರು ಬುಧವಾರ ಶಾಸಕ ಯಶ್ ಪಾಲ್ ಸುವರ್ಣ ಅವರ ನಿವಾಸಕ್ಕೆ ತೆರಳಿ ನೋಟಿಸ್ ಜಾರಿಗೊಳಿಸಿದ್ದರು. ಅದರಂತೆ ಅವರು ಗುರುವಾರ ರಾತ್ರಿ ಸುಮಾರು 8.25ರ ವೇಳೆಗೆ ನಗರ ಪೊಲೀಸ್ ಠಾಣೆಗೆ ಆಗಮಿಸಿ ತನಿಖಾಧಿಕಾರಿಗಳ ಮುಂದೆ ಹಾಜರಾದರು.


ವಿಚಾರಣೆ ವೇಳೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹಲವು ಪ್ರಶ್ನೆಗಳನ್ನು ಕೇಳಿದ್ದು, ಶಾಸಕರು ಅವಕ್ಕೆ ಉತ್ತರ ನೀಡಿದ್ದಾರೆ ಎಂದು ತಿಳಿದುಬಂದಿದೆ. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ವಿಚಾರಣೆಗೆ ಸಹಕರಿಸಿದ ಅವರು ರಾತ್ರಿ ಸುಮಾರು 9.30ರ ವೇಳೆಗೆ ಠಾಣೆಯಿಂದ ನಿರ್ಗಮಿಸಿದರು ಎಂದು ಮೂಲಗಳು ತಿಳಿಸಿವೆ.


About the Author

Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Tags:

Post a Comment

0 Comments

Post a Comment (0)
3/related/default