ಕುಂದಾಪುರ: ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ನೀಡಿರುವ ಹೇಳಿಕೆಗಳನ್ನು ಖಂಡಿಸಿ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕುಂದಾಪುರ ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಯಿತು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆದೂರು ಸದಾನಂದ ಶೆಟ್ಟಿ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪೊಲೀಸ್ ಠಾಣೆಗೆ ತೆರಳಿ, ಶಾಸಕ ಯಶ್ಪಾಲ್ ಸುವರ್ಣ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಸಾಮಾಜಿಕ ಮಾಧ್ಯಮ ರಾಜ್ಯ ಉಪಾಧ್ಯಕ್ಷ ಚಂದ್ರಶೇಖರ ಶೆಟ್ಟಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿನೋದ್ ಕ್ರಾಸ್ಟೋ, ಮಾಜಿ ಪುರಸಭಾ ಅಧ್ಯಕ್ಷೆ ದೇವಕಿ ಸಣ್ಣಯ್ಯ, ಕೆಡಿಪಿ ಸದಸ್ಯ ವಕ್ವಾಡಿ ರಮೇಶ್ ಶೆಟ್ಟಿ, ಪುರಸಭೆಯ ಮಾಜಿ ಸದಸ್ಯ ಕೇಶವ ಭಟ್, ಎನ್‌ಎಸ್‌ಯುಐ ಅಧ್ಯಕ್ಷ ಸುಜನ್, ಕಾಂಗ್ರೆಸ್ ಮುಖಂಡ ಗಣೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ದ್ವೇಷಪೂರಿತ ಹಾಗೂ ಪ್ರಚೋದನಕಾರಿ ಹೇಳಿಕೆಗಳ ವಿರುದ್ಧ ಕಾಂಗ್ರೆಸ್ ಕಾನೂನಿನ ಚೌಕಟ್ಟಿನಲ್ಲೇ ಹೋರಾಟ ಮುಂದುವರಿಸಲಿದೆ. ಇಂತಹ ಹೇಳಿಕೆಗಳಿಗೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಕಾಂಗ್ರೆಸ್ ಮುಖಂಡರು ಆಗ್ರಹಿಸಿದರು.
About the Author
Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.
📢 SUDDI LIVE WhatsApp Community
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.
📲 Join WhatsApp Community📢 SUDDI LIVE Facebook Page
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.
👍 Follow SUDDI LIVEನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

