ಉಡುಪಿ: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ನೀಡಲಾಗಿದ್ದ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾಡಲಾಗಿದೆ. ಈ ಹಿಂದೆ ಆ.26ರಂದು ಘೋಷಿಸಲಾಗಿದ್ದ ರಜೆಯನ್ನು ಇದೀಗ ಆ.25ಕ್ಕೆ ನಿಗದಿಪಡಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತು ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಬಾಣದರಂಗಯ್ಯ ಎನ್.ಆರ್. ಅವರು ಆದೇಶ ಹೊರಡಿಸಿದ್ದಾರೆ.
ಈದ್ ಮಿಲಾದ್ ಅಂಗವಾಗಿ ಆ.26ರಂದು ರಾಜ್ಯಾದ್ಯಂತ ಸಾರ್ವತ್ರಿಕ ರಜೆ ಘೋಷಿಸಿ ಈ ಹಿಂದೆ ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾಧಿಕಾರಿಗಳು ಸ್ಥಳೀಯ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ರಜೆ ದಿನಾಂಕ ಬದಲಾಯಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದರು.
ಜಿಲ್ಲಾಧಿಕಾರಿಗಳ ಮನವಿಯನ್ನು ಪರಿಗಣಿಸಿದ ಸರ್ಕಾರ, ಎರಡೂ ಜಿಲ್ಲೆಗಳಲ್ಲಿ ಈದ್ ಮಿಲಾದ್ ಸಾರ್ವತ್ರಿಕ ರಜೆಯನ್ನು ಆ.26ರ ಬದಲಾಗಿ ಆ.25ರಂದು ನೀಡಲು ನಿರ್ಧರಿಸಿದೆ.
ಹೀಗಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಆ.25ರಂದು ಈದ್ ಮಿಲಾದ್ ಪ್ರಯುಕ್ತ ಸಾರ್ವತ್ರಿಕ ರಜೆ ಇರಲಿದೆ.
About the Author
Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.
📢 SUDDI LIVE WhatsApp Community
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.
📲 Join WhatsApp Community📢 SUDDI LIVE Facebook Page
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.
👍 Follow SUDDI LIVEನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

