ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಾವಳಪಡೂರು ಪ್ರದೇಶದಲ್ಲಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇರಿದಂತೆ ಒಟ್ಟು ₹4.90 ಲಕ್ಷ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಆಗಸ್ಟ್ 12ರಂದು ಬಂಟ್ವಾಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ಯಶ್ ಕುಮಾರ್ ಶರ್ಮಾ, ಐಪಿಎಸ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಈ ವೇಳೆ ಸುಮಾರು ₹2.25 ಲಕ್ಷ ಮೌಲ್ಯದ 22.57 ಗ್ರಾಂ ಎಂಡಿಎಂಎ ಹಾಗೂ 30.34 ಗ್ರಾಂ ಗಾಂಜಾ ಪತ್ತೆಯಾಗಿದೆ.
ಡ್ರಗ್ಸ್ ಸಾಗಾಟಕ್ಕೆ ಬಳಸಲಾಗಿದೆ ಎನ್ನಲಾದ ಕಾರು ಹಾಗೂ ಐದು ಮೊಬೈಲ್ ಫೋನ್‌ಗಳನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅಡ್ಯಾರ್, ಮಂಗಳೂರಿನ ನಾಶೀರ್ ಹುಸೇನ್ (37), ಬಂಟ್ವಾಳದ ಗೋಳ್ತಮಜಲಿನ ಮಹಮ್ಮದ್ ಜುನೈದ್ (38) ಹಾಗೂ ಮಂಗಳೂರಿನ ಕಂಕನಾಡಿಯ ಮೊಹಮ್ಮದ್ ಅಫ್ರೀದಿ (24) ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 112/2026ರಂತೆ ಎನ್‌ಡಿಪಿಎಸ್ ಕಾಯ್ದೆ-1985ರ ಕಲಂ 8(C) ಜೊತೆಗೆ 22(C) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
About the Author
Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.
📢 SUDDI LIVE WhatsApp Community
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.
📲 Join WhatsApp Community📢 SUDDI LIVE Facebook Page
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.
👍 Follow SUDDI LIVEನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

