}

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳ ಪಟ್ಟಿಯಿಂದ ಅಗರ್ವಾಲ್‌ ಔಟ್‌; ಕರ್ನಾಟಕಕ್ಕೆ ಶೀಘ್ರ ಹೊಸ ಉಸ್ತುವಾರಿ

suddilive.com
By -
0

 


ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳ ಹೊಸ ಪಟ್ಟಿಯಲ್ಲಿ ಡಾ. ರಾಧಾಮೋಹನ್‌ ದಾಸ್‌ ಅಗರ್ವಾಲ್‌ ಅವರಿಗೆ ಸ್ಥಾನ ಸಿಗದ ಹಿನ್ನೆಲೆಯಲ್ಲಿ, ಕರ್ನಾಟಕ ಬಿಜೆಪಿ ಘಟಕಕ್ಕೂ ಶೀಘ್ರದಲ್ಲೇ ಹೊಸ ಉಸ್ತುವಾರಿಯ ನೇಮಕವಾಗುವ ಸಾಧ್ಯತೆ ಇದೆ.


ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕರ್ನಾಟಕದ ರಾಜ್ಯ ಉಸ್ತುವಾರಿಯಾಗಿ ನೇಮಕಗೊಂಡಿದ್ದ ಅಗರ್ವಾಲ್‌ ಅವರ ಕಾರ್ಯವೈಖರಿ ಕುರಿತು ಪಕ್ಷದೊಳಗೆ ಪರ-ವಿರೋಧದ ಅಭಿಪ್ರಾಯಗಳು ವ್ಯಕ್ತವಾಗಿದ್ದವು. ಕೋರ್‌ ಕಮಿಟಿ ಸಭೆಗಳಲ್ಲೂ ಕೆಲ ಹಿರಿಯ ನಾಯಕರು ಅವರ ಕಾರ್ಯಶೈಲಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಮತ್ತೊಂದೆಡೆ, ಸಂಘಟನಾತ್ಮಕ ವಿಚಾರಗಳಲ್ಲಿ ಅವರು ತೋರಿದ ಕಟ್ಟುನಿಟ್ಟಿನ ನಿಲುವಿಗೆ ಪಕ್ಷದ ಮತ್ತೊಂದು ವಲಯದಲ್ಲಿ ಮೆಚ್ಚುಗೆಯೂ ಇತ್ತು.


ಇದೀಗ ನಿತಿನ್‌ ನವೀನ್‌ ನೇತೃತ್ವದಲ್ಲಿ ರಚನೆಯಾಗಿರುವ ಬಿಜೆಪಿಯ ಹೊಸ ತಂಡದಲ್ಲಿ ಎಂಟು ಪ್ರಧಾನ ಕಾರ್ಯದರ್ಶಿಗಳ ಪಟ್ಟಿಯಲ್ಲಿ ಅಗರ್ವಾಲ್‌ ಅವರ ಹೆಸರು ಕಾಣಿಸಿಲ್ಲ. ಹೀಗಾಗಿ ಕರ್ನಾಟಕದ ರಾಜ್ಯ ಉಸ್ತುವಾರಿ ಜವಾಬ್ದಾರಿಯಿಂದಲೂ ಅವರು ಶೀಘ್ರದಲ್ಲೇ ಮುಕ್ತರಾಗುವ ಸಾಧ್ಯತೆ ಇದೆ.


ಅಗರ್ವಾಲ್‌ ಅವರ ಸ್ಥಾನಕ್ಕೆ ಯಾರನ್ನು ರಾಜ್ಯ ಉಸ್ತುವಾರಿಯಾಗಿ ನೇಮಕ ಮಾಡಲಾಗುತ್ತದೆ ಎಂಬುದು ಇದೀಗ ಬಿಜೆಪಿ ವಲಯದಲ್ಲಿ ಕುತೂಹಲ ಮೂಡಿಸಿದೆ. ಈ ಕುರಿತು ಕೆಲವೇ ದಿನಗಳಲ್ಲಿ ಸ್ಪಷ್ಟತೆ ಸಿಗುವ ನಿರೀಕ್ಷೆಯಿದೆ.

About the Author

Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Post a Comment

0 Comments

Post a Comment (0)
3/related/default