ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಬೆಳಗ್ಗೆ ಖಾಸಗಿ ಬಸ್ಸೊಂದು ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಬಸ್ಸಿನಲ್ಲಿದ್ದ ಏಳು ಮಂದಿ ಪ್ರಯಾಣಿಕರು ಸಮಯಪ್ರಜ್ಞೆಯಿಂದ ಯಾವುದೇ ಗಾಯಗಳಿಲ್ಲದೆ ಸುರಕ್ಷಿತವಾಗಿ ಪಾರಾಗಿದ್ದಾರೆ.
ಉಡುಪಿಯಿಂದ ಸಾಗರದತ್ತ ತೆರಳುತ್ತಿದ್ದ ಖಾಸಗಿ ಬಸ್ಸಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಾಣಿಸುತ್ತಿದ್ದಂತೆ ನಿರ್ವಾಹಕರು ಕೂಡಲೇ ಪ್ರಯಾಣಿಕರನ್ನು ಬಸ್ಸಿನಿಂದ ಕೆಳಗಿಳಿಸಿದ್ದಾರೆ. ಹೀಗಾಗಿ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತವೊಂದು ತಪ್ಪಿದೆ.
ಪ್ರಾಥಮಿಕ ಮಾಹಿತಿಯಂತೆ ಬಸ್ಸಿನ EDC ಬಾಕ್ಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಅದು ಬಸ್ಸಿಗೆ ವ್ಯಾಪಿಸಿದೆ ಎನ್ನಲಾಗಿದೆ. ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಉಡುಪಿ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.
ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ. ಬೆಂಕಿಗೆ ನಿಖರ ಕಾರಣವೇನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ.
About the Author
Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.
📢 SUDDI LIVE WhatsApp Community
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.
📲 Join WhatsApp Community📢 SUDDI LIVE Facebook Page
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.
👍 Follow SUDDI LIVEನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

