}

ಕರಾವಳಿಗೆ ಹೈಕೋರ್ಟ್ ಪೀಠ ಆಗಲೇಬೇಕು: ಒಗ್ಗಟ್ಟಿನ ಹೋರಾಟಕ್ಕೆ ಜಯಪ್ರಕಾಶ್ ಹೆಗ್ಡೆ ಕರೆ

suddilive.com
By -
0

 


ಉಡುಪಿ: ಕರಾವಳಿ ಭಾಗದ ಜನರಿಗೆ ಶೀಘ್ರ ನ್ಯಾಯ ದೊರೆಯಬೇಕು, ಸ್ಥಳೀಯ ಸಮಸ್ಯೆಗಳಿಗೆ ತ್ವರಿತ ಪರಿಹಾರ ಸಿಗಬೇಕು ಹಾಗೂ ನ್ಯಾಯಾಲಯದ ವಿಚಾರಣೆಗಾಗಿ ದೂರದ ಪ್ರದೇಶಗಳಿಗೆ ತೆರಳುವಾಗ ಎದುರಾಗುವ ಸಮಯ ಮತ್ತು ಆರ್ಥಿಕ ಹೊರೆಯನ್ನು ಕಡಿಮೆ ಮಾಡಬೇಕು ಎಂದಾದರೆ ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯಾಗುವುದು ಅಗತ್ಯ ಎಂದು ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ಹೇಳಿದರು.


ಜಿಲ್ಲಾ ಕರಾವಳಿ ಹೈಕೋರ್ಟ್ ಪೀಠ ಹೋರಾಟ ಸಮಿತಿ ಹಾಗೂ ಯು-ಆಕ್ಟ್ ವತಿಯಿಂದ ನಗರದ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಕಲಾ ಮಂಟಪದಲ್ಲಿ ಶನಿವಾರ ನಡೆದ ವಿವಿಧ ಸಂಘ-ಸಂಸ್ಥೆಗಳ ಹಕ್ಕೊತ್ತಾಯ ಸಭೆಯಲ್ಲಿ ಮಾತನಾಡಿದ ಅವರು, ಕರಾವಳಿಗೆ ಹೈಕೋರ್ಟ್ ಪೀಠ ಬೇಕೆಂಬ ಬೇಡಿಕೆಗೆ ತಮ್ಮ ಸಂಪೂರ್ಣ ಬೆಂಬಲವಿದೆ. ಈ ನಿಟ್ಟಿನಲ್ಲಿ ಎಲ್ಲರೂ ಒಗ್ಗೂಡಿ ಹೋರಾಟ ನಡೆಸಬೇಕು ಎಂದು ಕರೆ ನೀಡಿದರು.


ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಹಾಗೂ ಎಂಜಿನಿಯರಿಂಗ್ ಕಾಲೇಜುಗಳ ಸ್ಥಾಪನೆಯ ಅಗತ್ಯವೂ ಇದೆ. ಈ ಶಿಕ್ಷಣ ಸಂಸ್ಥೆಗಳಿಗೆ ರಾಜ್ಯ ಮಟ್ಟದಲ್ಲಿ ಪ್ರವೇಶ ಪರೀಕ್ಷೆ ನಡೆಸಿ, ಸ್ಥಳೀಯ ವಿದ್ಯಾರ್ಥಿಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವೇಶ ದೊರೆಯುವಂತೆ ಅವಕಾಶ ಕಲ್ಪಿಸಬೇಕು ಎಂದು ಅವರು ಆಗ್ರಹಿಸಿದರು.


ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕರಾವಳಿ ಹೈಕೋರ್ಟ್ ಪೀಠ ಹೋರಾಟ ಸಮಿತಿ ಸಂಚಾಲಕ ಪ್ರೇಮ್ ಪ್ರಸಾದ್ ಶೆಟ್ಟಿ ಮಾತನಾಡಿ, ಹೈಕೋರ್ಟ್ ಪೀಠದ ಅಗತ್ಯದ ಕುರಿತು ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರತಿಯೊಂದು ತಾಲೂಕಿನಲ್ಲಿ ಹಕ್ಕೊತ್ತಾಯ ಸಭೆಗಳನ್ನು ನಡೆಸಿ, ಸ್ಥಳೀಯರು ಹಾಗೂ ವಿವಿಧ ಸಂಘ-ಸಂಸ್ಥೆಗಳಿಗೆ ಪೀಠ ಸ್ಥಾಪನೆಯ ಅಗತ್ಯವನ್ನು ಮನವರಿಕೆ ಮಾಡಿಕೊಡಬೇಕು ಎಂದರು.


ಕರಾವಳಿ ಹೈಕೋರ್ಟ್ ಪೀಠದ ಬೇಡಿಕೆ ದೊಡ್ಡ ಮಟ್ಟದ ಜನಾಂದೋಲನವಾಗಿ ರೂಪುಗೊಳ್ಳಬೇಕು. ಇದಕ್ಕಾಗಿ ವಿವಿಧ ಕ್ಷೇತ್ರಗಳ ಜನರು ಹಾಗೂ ಸಂಘಟನೆಗಳು ಒಂದಾಗಿ ಹೋರಾಟಕ್ಕೆ ಕೈಜೋಡಿಸಬೇಕು ಎಂದು ಅವರು ಹೇಳಿದರು.


ರಾಜ್ಯ ಬಾರ್ ಕೌನ್ಸಿಲ್ ಸದಸ್ಯೆ ಶ್ಯಾಮಲಾ ಭಂಡಾರಿ ಮಾತನಾಡಿ, ಹೈಕೋರ್ಟ್ ಪೀಠದ ಬೇಡಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಹಾಗೂ ರಾಜ್ಯ ಮುಖ್ಯ ನ್ಯಾಯಮೂರ್ತಿಗಳನ್ನು ಭೇಟಿ ಮಾಡಿ ಮನವರಿಕೆ ಮಾಡಿಕೊಡಬೇಕು. ಬಳಿಕ ನೆರೆಯ ಜಿಲ್ಲೆಗಳ ಜನಪ್ರತಿನಿಧಿಗಳನ್ನೂ ಸಂಪರ್ಕಿಸಿ, ಅವರ ಬೆಂಬಲ ಪಡೆದು ಹೋರಾಟವನ್ನು ಮತ್ತಷ್ಟು ಬಲಪಡಿಸಬೇಕು ಎಂದು ಸಲಹೆ ನೀಡಿದರು.


ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಜಗದೀಶ್ ಶೇಣವ ಮಾತನಾಡಿ, ಉಡುಪಿಯಲ್ಲಿ ಈಗಾಗಲೇ ಹೋರಾಟ ಸಮಿತಿ ರಚನೆಯಾಗಿದೆ. ಕರಾವಳಿಯ ವಿವಿಧ ಭಾಗಗಳ ಹೋರಾಟ ಸಮಿತಿಗಳು ಒಗ್ಗೂಡಿ ಹೋರಾಟ ನಡೆಸಿದರೆ ಬೇಡಿಕೆಗೆ ಹೆಚ್ಚಿನ ಬಲ ಬರಲಿದೆ ಎಂದರು.


ಮನೋವೈದ್ಯ ಡಾ. ಪಿ.ವಿ. ಭಂಡಾರಿ ಮಾತನಾಡಿ, ಕರಾವಳಿ ಭಾಗಕ್ಕೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ವಿಚಾರದಲ್ಲಿ ಸರಕಾರ ಹಿಂದೇಟು ಹಾಕುತ್ತಿರುವುದು ವಿಷಾದನೀಯ. ಹಕ್ಕು ಮತ್ತು ಸೌಲಭ್ಯಗಳಿಗಾಗಿ ಜನರು ಒಗ್ಗಟ್ಟಿನಿಂದ ಧ್ವನಿ ಎತ್ತಬೇಕಿದೆ ಎಂದು ಹೇಳಿದರು.


ಸಭೆಯಲ್ಲಿ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ, ಹಿರಿಯ ಪತ್ರಕರ್ತ ನಿತ್ಯಾನಂದ ಪಡ್ರೆ, ಉಪನ್ಯಾಸಕಿ ಡಾ. ಸವಿತಾ ಕೊರಗ, ಯಾಸಿನ್ ಶೀರೂರು ಸೇರಿದಂತೆ ವಿವಿಧ ತಾಲೂಕುಗಳ ವಕೀಲರ ಸಂಘಗಳ ಪದಾಧಿಕಾರಿಗಳು, ವಿವಿಧ ಸಂಘಟನೆಗಳ ಮುಖಂಡರು ಹಾಗೂ ಹಿರಿಯ ನಾಗರಿಕರು ಭಾಗವಹಿಸಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ವಿಜಯ್ ಡಿ’ಸೋಜಾ ವಂದಿಸಿದರು. ಸುರೇಶ್ ಕಾಮತ್ ಕಟಪಾಡಿ ಕಾರ್ಯಕ್ರಮ ನಿರೂಪಿಸಿದರು.

About the Author

suddilive Suddilive.com covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Tags:

Post a Comment

0 Comments

Post a Comment (0)
3/related/default