}

ಭಾರತ್ ಜೋಡೋ ಯುವ ಸಂಘ: ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ಮಾಹಿತಿ ಕಾರ್ಯಾಗಾರ ಸಭೆ

suddilive.com
By -
0

 



ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ಭಾರತ್ ಜೋಡೋ ಯುವ ಸಂಘದ ಜಿಲ್ಲಾ ಮಾಹಿತಿ ಕಾರ್ಯಾಗಾರ ಸಭೆಯು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಝ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.


ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಯುವ ಕಾಂಗ್ರೆಸ್ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವುದು, ಯುವ ಕಾರ್ಯಕರ್ತರನ್ನು ಸಕ್ರಿಯಗೊಳಿಸುವುದು ಹಾಗೂ ಮುಂಬರುವ ದಿನಗಳಲ್ಲಿ ಹಮ್ಮಿಕೊಳ್ಳಬೇಕಾದ ವಿವಿಧ ಸಂಘಟನಾ ಮತ್ತು ಜನಪರ ಕಾರ್ಯಕ್ರಮಗಳ ಕುರಿತು ಸಮಗ್ರವಾಗಿ ಚರ್ಚಿಸಲಾಯಿತು.


ಸಭೆಯನ್ನು ಉದ್ದೇಶಿಸಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷರು, ಯುವ ಕಾಂಗ್ರೆಸ್ ರಾಜ್ಯ ಉಸ್ತುವಾರಿಗಳು ಹಾಗೂ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಅವರು, ಯುವ ಕಾರ್ಯಕರ್ತರು ಸಂಘಟನೆಯನ್ನು ತಳಮಟ್ಟದಿಂದ ಬಲಪಡಿಸುವ ನಿಟ್ಟಿನಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು. ಸಂಘಟನೆಯ ಚಟುವಟಿಕೆಗಳನ್ನು ಗ್ರಾಮ, ಬೂತ್ ಹಾಗೂ ವಾರ್ಡ್ ಮಟ್ಟಕ್ಕೆ ಕೊಂಡೊಯ್ಯುವ ಕುರಿತು ಅಗತ್ಯ ಮಾರ್ಗದರ್ಶನ ನೀಡಿದರು.


ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿಗಳಾದ ಕಲ್ಯಾಣ್ ತೇಜಸ್ ಮತ್ತು ಸೋನಿಯಾ,ಸೇರಿದಂತೆ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳಾದ ಸುನಿತ್ ದೇಸಾಯಿ, ಬಷೀರ್, ಫಾರೂಕ್ ಪೆರ್ನೆ, ಆಸೀಫ್ ಬಜಾಲ್, ಮುಫೀದ್, ಪೃಥ್ವಿರಾಜ್, ವೆಲ್ವಿನ್, ಶ್ರುತಿ, ಸಂಜನಾ ಹಾಗೂ ಆಫ್ರಿನ್ ಉಪಸ್ಥಿತರಿದ್ದರು.


ಸಭೆಯಲ್ಲಿ ಯುವ ಕಾಂಗ್ರೆಸ್ ಸಂಘಟನೆಯ ಮುಂದಿನ ಕಾರ್ಯಚಟುವಟಿಕೆಗಳು, ಸದಸ್ಯತ್ವ ವಿಸ್ತರಣೆ, ಯುವಕರನ್ನು ಸಂಘಟನೆಯೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಸಂಪರ್ಕಿಸುವುದು ಹಾಗೂ ಜನಪರ ವಿಚಾರಗಳನ್ನು ಮುಂದಿಟ್ಟುಕೊಂಡು ಕಾರ್ಯಕ್ರಮಗಳನ್ನು ರೂಪಿಸುವ ಕುರಿತು ಚರ್ಚೆ ನಡೆಯಿತು.


About the Author

suddilive Suddilive.com covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Tags:

Post a Comment

0 Comments

Post a Comment (0)
3/related/default