}

ಮಂಗಳೂರು–ಉಡುಪಿ ಮಾರ್ಗದಲ್ಲಿ ಅಕ್ರಮ ಮದ್ಯ ಸಾಗಾಟ ಬಯಲು: 438 ಲೀಟರ್ ಮದ್ಯ ಸೀಜ್

suddilive.com
By -
0

 



ಮಂಗಳೂರು: ಗೋವಾದಿಂದ ಮಂಗಳೂರು ಮತ್ತು ಉಡುಪಿ ಮಾರ್ಗವಾಗಿ ಕೇರಳಕ್ಕೆ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಜಾಲವೊಂದನ್ನು ಅಬಕಾರಿ ಇಲಾಖೆ ಅಧಿಕಾರಿಗಳ ವಿಶೇಷ ತಂಡ ಪತ್ತೆಹಚ್ಚಿದ್ದು, 438 ಲೀಟರ್ ಅಕ್ರಮ ಮದ್ಯವನ್ನು ವಶಪಡಿಸಿಕೊಂಡಿದೆ.


ಮಂಗಳೂರು ವಿಭಾಗದ ಅಬಕಾರಿ ಜಂಟಿ ಆಯುಕ್ತ ಬಾಲಕೃಷ್ಣ ಸಿ. ಎಚ್. ಅವರ ಆದೇಶದಂತೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಅಬಕಾರಿ ಉಪ ಆಯುಕ್ತೆ ಬಿಂದುಶ್ರೀ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.


ದಾಳಿಯ ವೇಳೆ ಯಾವುದೇ ಪರವಾನಗಿ ಇಲ್ಲದೆ ಗೋವಾದಿಂದ ಸಾಗಿಸಲಾಗುತ್ತಿದ್ದ 438 ಲೀಟರ್ ಮದ್ಯ ಪತ್ತೆಯಾಗಿದ್ದು, ಸಾಗಾಟಕ್ಕೆ ಬಳಸಿದ್ದ ಸ್ವಿಫ್ಟ್ ಡಿಸೈರ್ ಕಾರನ್ನೂ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.


ಪ್ರಕರಣಕ್ಕೆ ಸಂಬಂಧಿಸಿದಂತೆ ವಾಹನದ ಮಾಲೀಕ ಹಾಗೂ ಚಾಲಕ ಬಸವರಾಜು ಬೋವಿ ಮತ್ತು ನಾಗವೇಣಿ ನಾಯಕ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.


ಮಂಗಳೂರು ಉಪವಿಭಾಗದ ಉಪ ಅಧೀಕ್ಷಕಿ ಗಾಯತ್ರಿ ಸಿ. ಎಚ್., ಬಂಟ್ವಾಳ ಉಪವಿಭಾಗದ ಉಪ ಅಧೀಕ್ಷಕ ಸಂತೋಷ್ ಮೋಡಗಿ, ಬಂಟ್ವಾಳ ತಾಲೂಕು ವಲಯ ಅಬಕಾರಿ ನಿರೀಕ್ಷಕ ಲಕ್ಷ್ಮಣ್ ಶಿವಣಗಿ, ತಲಪಾಡಿ ಚೆಕ್‌ಪೋಸ್ಟ್ ನಿರೀಕ್ಷಕ ದತ್ತಗುರು ಅಥೆಣಿ ಸೇರಿದಂತೆ ಉಪ ನಿರೀಕ್ಷಕರಾದ ಜಯಪ್ಪ, ಶಿವಶಂಕರ್, ಅಭಿಷೇಕ್ ಹಾಗೂ ಪೇದೆ ಪ್ರಕಾಶ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.


ಜಂಟಿ ಆಯುಕ್ತರ ಕಚೇರಿಯ ನಿರೀಕ್ಷಕಿ ಸುನಿತಾ ಅವರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.

About the Author

Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Tags:

Post a Comment

0 Comments

Post a Comment (0)
3/related/default