ಕುಂದಾಪುರ: ಎರಡು ಲಾರಿಗಳು ಪರಸ್ಪರ ಢಿಕ್ಕಿಯಾದ ಪರಿಣಾಮ ಓರ್ವ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಹೆಮ್ಮಾಡಿಯ ರಾಷ್ಟ್ರೀಯ ಹೆದ್ದಾರಿಯ ಕಾಶಿಮಠ ಕ್ರಾಸ್ ಬಳಿ ಮಂಗಳವಾರ ರಾತ್ರಿ ನಡೆದಿದೆ.
ಮಂಗಳೂರಿನಿಂದ ಅಡುಗೆ ಎಣ್ಣೆ ಪ್ಯಾಕೆಟ್‌ಗಳ ಬಾಕ್ಸ್‌ಗಳನ್ನು ಬೀದರ್‌ಗೆ ಸಾಗಿಸುತ್ತಿದ್ದ ಲಾರಿಯ ಚಾಲಕ, ಮಹಾರಾಷ್ಟ್ರ ಮೂಲದ ಲಕ್ಷ್ಮಣ ಮುರಳೀಧರ್ ವಾಗೋಡೆ (54) ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರ ಸ್ಥಿತಿ ಚಿಂತಾಜನಕವಾಗಿದ್ದು, ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದಲ್ಲಿ ಲಾರಿಯ ಕ್ಲೀನರ್ ದಯಾನಂದ್ ಅವರಿಗೂ ಸಣ್ಣಪುಟ್ಟ ಗಾಯಗಳಾಗಿವೆ.
ಹೆಮ್ಮಾಡಿ ಸಮೀಪದ ಮುಳ್ಳಿಕಟ್ಟೆ ರಾಷ್ಟ್ರೀಯ ಹೆದ್ದಾರಿ ಬಳಿಯಲ್ಲಿ ಸೇತುವೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಬ್ಯಾರಿಕೇಡ್ ಅಳವಡಿಸಿ ರಸ್ತೆಯ ಬಲಭಾಗಕ್ಕೆ ವಾಹನಗಳ ಸಂಚಾರಕ್ಕೆ ಡೈವರ್ಶನ್ ನೀಡಲಾಗಿತ್ತು. ಈ ವೇಳೆ ಮುಂಭಾಗದಲ್ಲಿದ್ದ ಲಾರಿ ನಿಧಾನವಾಗಿ ಸಾಗುತ್ತಿದ್ದಾಗ, ಹಿಂದಿನಿಂದ ಬರುತ್ತಿದ್ದ ಲಕ್ಷ್ಮಣ ಅವರ ಲಾರಿ ಅಜಾಗರೂಕತೆಯಿಂದ ಅದಕ್ಕೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಢಿಕ್ಕಿಯ ರಭಸಕ್ಕೆ ಲಕ್ಷ್ಮಣ ಅವರ ತಲೆಗೆ ಗಂಭೀರ ಗಾಯವಾಗಿದ್ದು, ದೇಹದ ಇತರ ಭಾಗಗಳಿಗೂ ಗಾಯಗಳಾಗಿವೆ. ಕ್ಲೀನರ್ ದಯಾನಂದ್ ಅವರ ಕೈ, ಕಾಲು ಸೇರಿದಂತೆ ದೇಹದ ವಿವಿಧ ಭಾಗಗಳಿಗೆ ಗಾಯಗಳಾಗಿವೆ.
ಘಟನೆ ತಿಳಿದು ಕುಂದಾಪುರ ಸಂಚಾರ ಠಾಣೆಯ ಪಿಎಸ್‌ಐ ಅನೂಪ್ ನಾಯಕ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಹೆದ್ದಾರಿಯಲ್ಲಿ ವಾಹನ ಸಂಚಾರ ಸುಗಮಗೊಳಿಸಲಾಯಿತು. ಈ ಕುರಿತು ಕುಂದಾಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
About the Author
Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.
📢 SUDDI LIVE WhatsApp Community
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.
📲 Join WhatsApp Community📢 SUDDI LIVE Facebook Page
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.
👍 Follow SUDDI LIVEನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

