ಹೊಸಕೋಟೆ: ಖಾಸಗಿ ಬಸ್ ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕ್ಯಾಂಟರ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಬಸ್‌ನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ದೊಡ್ಡಹುಲ್ಲೂರು ಪ್ಲೇಓವರ್ ಬಳಿ ನಡೆದಿದೆ.
ಅಪಘಾತದ ರಭಸಕ್ಕೆ ಕ್ಯಾಂಟರ್ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ಚಾಲಕನ ಗುರುತು ಹಾಗೂ ಇತರ ವಿವರಗಳನ್ನು ಪೊಲೀಸರು ಕಲೆಹಾಕುತ್ತಿದ್ದಾರೆ.
ಇನ್ನು ಖಾಸಗಿ ಬಸ್‌ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದ ಪರಿಣಾಮ ರಸ್ತೆಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಹಲವು ಕಿಲೋಮೀಟರ್‌ಗಳಷ್ಟು ದೂರ ಟ್ರಾಫಿಕ್ ಜಾಮ್ ಉಂಟಾಗಿದೆ. ಸ್ಥಳಕ್ಕೆ ಹೊಸಕೋಟೆ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತದ ನಿಖರ ಕಾರಣದ ಬಗ್ಗೆ ತನಿಖೆ ಮುಂದುವರಿಸಿದ್ದಾರೆ.
ಘಟನೆ ಹೊಸಕೋಟೆ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
About the Author
Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.
📢 SUDDI LIVE WhatsApp Community
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.
📲 Join WhatsApp Community📢 SUDDI LIVE Facebook Page
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.
👍 Follow SUDDI LIVEನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️
