}

ಐವನ್ ಡಿ’ಸೋಜಾ RGUHS ಸೆನೆಟ್ ಸದಸ್ಯರಾಗಿ ನಾಮನಿರ್ದೇಶನ

suddilive.com
By -
0

 



ಮಂಗಳೂರು: ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ ಅವರನ್ನು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದ (RGUHS) ಸೆನೆಟ್ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ.


RGUHS ಕಾಯ್ದೆ 1994ರ ಕಲಂ 21(1)(Viii)ರನ್ವಯ ವಿಧಾನ ಪರಿಷತ್ ಸಭಾಪತಿ ಅವರು ಆ.25ರಂದು ಐವನ್ ಡಿ’ಸೋಜಾ ಅವರನ್ನು ಸೆನೆಟ್ ಸದಸ್ಯರಾಗಿ ನೇಮಕ ಮಾಡಿದ್ದಾರೆ. ಈ ಹುದ್ದೆಯಲ್ಲಿ ಅವರು 2030ರ ಜೂನ್ 17ರವರೆಗೆ ಮುಂದುವರಿಯಲಿದ್ದಾರೆ.


ಶಿಕ್ಷಣ ಕ್ಷೇತ್ರದಲ್ಲಿ ಹಲವು ವರ್ಷಗಳ ಅನುಭವ ಹೊಂದಿರುವ ಐವನ್ ಡಿ’ಸೋಜಾ ಅವರು ಈ ಹಿಂದೆ ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಹಾಗೂ ಸೆನೆಟ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಅಕಾಡೆಮಿಕ್ ಕೌನ್ಸಿಲ್‌ನಲ್ಲಿಯೂ ಜವಾಬ್ದಾರಿ ನಿರ್ವಹಿಸಿರುವ ಅವರು, ವಿವಿಧ ಸಮಿತಿಗಳ ಸಂಚಾಲಕರಾಗಿ ಕಾರ್ಯನಿರ್ವಹಿಸಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಹಲವು ಹೊಸ ಶೈಕ್ಷಣಿಕ ಕೋರ್ಸ್‌ಗಳ ಆರಂಭಕ್ಕೂ ಅವರು ಕೊಡುಗೆ ನೀಡಿದ್ದಾರೆ.


ಸಾರ್ವಜನಿಕ ಆಡಳಿತ ಕ್ಷೇತ್ರದಲ್ಲೂ ಅನುಭವ ಹೊಂದಿರುವ ಐವನ್ ಡಿ’ಸೋಜಾ ಅವರು ಕರ್ನಾಟಕ ಸರ್ಕಾರದ ಮುಖ್ಯ ಸಚೇತಕರಾಗಿ ಹಾಗೂ ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು.


ವೈದ್ಯಕೀಯ ಶಿಕ್ಷಣದ ಅಭಿವೃದ್ಧಿ ಹಾಗೂ ವಿಶ್ವವಿದ್ಯಾನಿಲಯದ ಶೈಕ್ಷಣಿಕ ಚಟುವಟಿಕೆಗಳಿಗೆ ತಮ್ಮ ಅನುಭವದ ಮೂಲಕ ಅವರು ಸೆನೆಟ್ ಸದಸ್ಯರಾಗಿ ಪರಿಣಾಮಕಾರಿ ಕೊಡುಗೆ ನೀಡುವ ನಿರೀಕ್ಷೆ ಇದೆ.

About the Author

Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Tags:

Post a Comment

0 Comments

Post a Comment (0)
3/related/default