ಕಡಬ, ಆ. 29: ಕಳೆದ ಕೆಲ ದಿನಗಳಿಂದ ಬಳ್ಳ ಪ್ರದೇಶದಲ್ಲಿ ಸಂಚರಿಸುತ್ತಿದ್ದ ಕಾಡಾನೆಗಳ ಹಿಂಡು ಶುಕ್ರವಾರ ಐತೂರು ಗ್ರಾಮದತ್ತ ತೆರಳಿ, ಕೊರಿಯರ್ ಸಮೀಪದ ಅರಣ್ಯ ಇಲಾಖೆಯ ರಬ್ಬರ್ ತೋಟಕ್ಕೆ ನುಗ್ಗಿದೆ. ಕಾಡಾನೆಗಳು ವಸತಿ ಪ್ರದೇಶ ಹಾಗೂ ಕೃಷಿ ಜಮೀನುಗಳ ಸಮೀಪದಲ್ಲೇ ಕಾಣಿಸಿಕೊಂಡಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಸುಮಾರು ಎಂಟು ಕಾಡಾನೆಗಳಿರುವ ಈ ಹಿಂಡಿನಲ್ಲಿ ಎರಡು ಮರಿಯಾನೆಗಳೂ ಇವೆ. ಬಳ್ಳ ಗ್ರಾಮದ ಪಠೋಳಿ ಪ್ರದೇಶದಲ್ಲಿ ಕಾಡಾನೆಗಳ ಹೆಜ್ಜೆ ಗುರುತುಗಳು ಪತ್ತೆಯಾದ ಬಳಿಕ ಹಿಂಡು ಕಲ್ಕಲ್ ಪ್ರದೇಶದತ್ತ ಸಾಗಿತ್ತು. ಈ ವೇಳೆ ಹಲವು ಬೈನೆ ಮರಗಳನ್ನು ಮುರಿದು ಹಾನಿಗೊಳಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ನಂತರ ಎಣ್ಣೆಮಜಲು ಸಮೀಪದ ಬೀರಿಕಾಡು ಪ್ರದೇಶದ ಮೂಲಕ ಸಂಚರಿಸಿದ ಆನೆಗಳ ಹಿಂಡು ನದಿಯನ್ನು ದಾಟಿ ಐತೂರು ಗ್ರಾಮದ ಏನ್ಕೂಪ್ ಕ್ವಾರ್ಟರ್ಸ್ ಹಾಗೂ ಓಟಕಜೆ ಪರಿಸರದ ಮೂಲಕ ಮುಂದೆ ಸಾಗಿದ್ದು, ಕೊನೆಗೆ ಕೊರಿಯರ್ ಸಮೀಪದ ಅರಣ್ಯ ಇಲಾಖೆಯ ರಬ್ಬರ್ ತೋಟವನ್ನು ಪ್ರವೇಶಿಸಿದೆ. ಸದ್ಯ ಆನೆಗಳು ಇದೇ ತೋಟದಲ್ಲಿ ಬೀಡುಬಿಟ್ಟಿವೆ ಎನ್ನಲಾಗಿದೆ.
ಕಾಡಾನೆಗಳ ಹಿಂಡು ಜನವಸತಿ ಹಾಗೂ ಕೃಷಿ ಪ್ರದೇಶಗಳ ಸುತ್ತಮುತ್ತ ಇರುವುದರಿಂದ ತೋಟಗಳಿಗೆ ತೆರಳುವ ರೈತರು, ಕಾರ್ಮಿಕರು ಮತ್ತು ಶಾಲಾ ವಿದ್ಯಾರ್ಥಿಗಳಲ್ಲಿ ಆತಂಕ ಹೆಚ್ಚಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಗ್ರಾಮಸ್ಥರು ಪರಸ್ಪರ ಮಾಹಿತಿ ಹಂಚಿಕೊಳ್ಳುತ್ತಿದ್ದು, ಒಂಟಿಯಾಗಿ ಸಂಚರಿಸದಂತೆ ಹಾಗೂ ಕಾಡಾನೆಗಳ ಚಲನವಲನ ಕಂಡುಬಂದರೆ ತಕ್ಷಣ ಇತರರಿಗೆ ಮಾಹಿತಿ ನೀಡುವಂತೆ ಸೂಚಿಸುತ್ತಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಆನೆ ಕಾರ್ಯಪಡೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಕಾಡಾನೆಗಳ ಚಲನವಲನದ ಮೇಲೆ ನಿಗಾ ಇಡಲಾಗಿದ್ದು, ಅವುಗಳನ್ನು ಸುರಕ್ಷಿತವಾಗಿ ಕಾಡಿನತ್ತ ಮರಳಿ ಓಡಿಸುವ ಕಾರ್ಯಾಚರಣೆ ಆರಂಭಿಸಲಾಗಿದೆ.
About the Author
Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.
📢 SUDDI LIVE WhatsApp Community
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.
📲 Join WhatsApp Community📢 SUDDI LIVE Facebook Page
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.
👍 Follow SUDDI LIVEನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

