ಕಾನ್ಪುರದಲ್ಲಿ ತರಬೇತಿ ವಿಮಾನ ಪತನ: ಉಡುಪಿ ಮೂಲದ ತರಬೇತಿ ಪೈಲೆಟ್ ಅಭಿಷೇಕ್ ಪೂಜಾರಿ ಮೃತ್ಯು
ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಆ.27ರಂದು ಖಾಸಗಿ ತರಬೇತಿ ವಿಮಾನ ಪತನಗೊಂಡು ಉಡುಪಿ ಜಿಲ್ಲೆಯ ಮೂಲದ ತರಬೇತಿ ಪೈಲೆಟ್ ಅಭಿಷೇಕ್ ಪೂಜಾರಿ ಮೃತಪಟ್ಟಿರುವುದು ತಿಳಿದುಬಂದಿದೆ.
ಕಾನ್ಪುರದಲ್ಲಿ ತರಬೇತಿ ವಿಮಾನ ಪತನಗೊಂಡಿರುವ ಸುದ್ದಿ ಹೊರಬಿದ್ದ ಬೆನ್ನಲ್ಲೇ, ಘಟನೆಯಲ್ಲಿ ಅಭಿಷೇಕ್ ಪೂಜಾರಿ ಮೃತಪಟ್ಟಿರುವ ಮಾಹಿತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಈ ಹಿನ್ನೆಲೆಯಲ್ಲಿ ಅವರ ಕುಟುಂಬದ ಹಿನ್ನೆಲೆ ಹಾಗೂ ಘಟನೆಯ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿದೆ.
ಅಭಿಷೇಕ್ ಪೂಜಾರಿ ಅವರು ಉಡುಪಿ ಜಿಲ್ಲೆಯ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಕಣಜಾರು ಗ್ರಾಮದ ಕಡೇಬೆರ್ಕೆ ಮೂಲದವರು. ಕಳೆದ ಸುಮಾರು ಎರಡೂವರೆ ವರ್ಷಗಳಿಂದ ಕಾನ್ಪುರದಲ್ಲಿ ಖಾಸಗಿ ತರಬೇತಿ ಪೈಲೆಟ್ ಆಗಿ ತರಬೇತಿ ಪಡೆಯುತ್ತಿದ್ದರು ಎನ್ನಲಾಗಿದೆ.
ಅಭಿಷೇಕ್ ಅವರ ತಂದೆ ಪ್ರಭಾಕರ ಪೂಜಾರಿ ಹಾಗೂ ತಾಯಿ ಶಶಿಕಲಾ ಪೂಜಾರಿ ಅವರು ಮುಂಬೈನಲ್ಲಿ ವಾಸವಾಗಿದ್ದಾರೆ. ಅಭಿಷೇಕ್ ಅವರು ಆಗಾಗ್ಗೆ ಉಡುಪಿಯ ಕಣಜಾರು ಗ್ರಾಮದ ಕಡೇಬೆರ್ಕೆಯಲ್ಲಿರುವ ತಮ್ಮ ತಾಯಿಯ ಸಹೋದರ ಜೀವನ್ ಕುಮಾರ್ ಅವರ ಮನೆಗೆ ಭೇಟಿ ನೀಡುತ್ತಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ವಿಮಾನ ಪತನದ ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಕುಟುಂಬದವರು ಮುಂದಿನ ಪ್ರಕ್ರಿಯೆಗಳಿಗಾಗಿ ಕಾನ್ಪುರಕ್ಕೆ ತೆರಳಿದ್ದಾರೆ. ಮೃತದೇಹ ಹಸ್ತಾಂತರ ಸೇರಿದಂತೆ ಅಗತ್ಯ ಕಾನೂನು ಪ್ರಕ್ರಿಯೆಗಳು ನಡೆಯುತ್ತಿವೆ ಎಂದು ತಿಳಿದುಬಂದಿದೆ.
About the Author
Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.
📢 SUDDI LIVE WhatsApp Community
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.
📲 Join WhatsApp Community📢 SUDDI LIVE Facebook Page
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.
👍 Follow SUDDI LIVEನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

