}

ಕಾರ್ಕಳದಲ್ಲಿ ಹಿಂಸಾತ್ಮಕವಾಗಿ ಜಾನುವಾರು ಸಾಗಾಟ; ಪಿಕಪ್‌ ವಾಹನ ಸಹಿತ 3 ಜಾನುವಾರುಗಳ ರಕ್ಷಣೆ

suddilive.com
By -
0

 ಕಾರ್ಕಳ: ಹಿಂಸಾತ್ಮಕವಾಗಿ ಜಾನುವಾರುಗಳನ್ನು ಪಿಕಪ್‌ ವಾಹನದಲ್ಲಿ ಸಾಗಿಸುತ್ತಿದ್ದ ಆರೋಪದ ಮೇಲೆ ಕಾರ್ಕಳ ಗ್ರಾಮಾಂತರ ಪೊಲೀಸರು ಕಾರ್ಯಾಚರಣೆ ನಡೆಸಿ ಮೂರು ಜಾನುವಾರುಗಳನ್ನು ರಕ್ಷಿಸಿರುವ ಘಟನೆ ನಡೆದಿದೆ.


ಆಗಸ್ಟ್‌ 21ರಂದು ಬೆಳಗ್ಗೆ ಮುಂಡ್ಕೂರು ಗ್ರಾಮದ ಸಂಕಲಕರಿಯ ಬಸ್‌ ನಿಲ್ದಾಣದ ಬಳಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಕೆಎ-19-ಎಎಫ್-2515 ನೋಂದಣಿ ಸಂಖ್ಯೆಯ ಟಾಟಾ ಪಿಕಪ್‌ ವಾಹನವನ್ನು ತಡೆದು ಪರಿಶೀಲಿಸಿದಾಗ, ಒಂದು ಗಂಡು ಹಾಗೂ ಎರಡು ಹೆಣ್ಣು ಜಾನುವಾರುಗಳನ್ನು ಹಗ್ಗಗಳಿಂದ ಕಟ್ಟಿ ಸಾಗಿಸುತ್ತಿರುವುದು ಪತ್ತೆಯಾಗಿದೆ.


ಜಾನುವಾರುಗಳನ್ನು ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಸಾಗಿಸಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೆ, ಅವುಗಳನ್ನು ಹಿಂಸಾತ್ಮಕ ರೀತಿಯಲ್ಲಿ ವಾಹನದಲ್ಲಿ ಕಟ್ಟಿಹಾಕಿ ಸಾಗಿಸಲಾಗುತ್ತಿತ್ತು ಎನ್ನಲಾಗಿದೆ.


ಪೊಲೀಸರು ಪಿಕಪ್‌ ವಾಹನದ ಜೊತೆಗೆ ಮೂರು ಜಾನುವಾರುಗಳು ಹಾಗೂ ಅವುಗಳನ್ನು ಕಟ್ಟಲು ಬಳಸಿದ್ದ ಮೂರು ಹಗ್ಗಗಳನ್ನು ವಶಪಡಿಸಿಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

About the Author

Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Tags:

Post a Comment

0 Comments

Post a Comment (0)
3/related/default