}

ಮಂಗಳೂರಿನ KFC ಮಳಿಗೆಯಲ್ಲಿ ದಿಢೀರ್ ಆಹಾರ ಇಲಾಖೆ ಅಧಿಕಾರಿಗಳ ದಿಢೀರ್ ತಪಾಸಣೆ: ಚಿಕನ್, ಎಣ್ಣೆ ಮಾದರಿ ಸಂಗ್ರಹ

suddilive.com
By -
0


ಮಂಗಳೂರು: ಕೆ.ಎಸ್. ರಾವ್ ರಸ್ತೆಯಲ್ಲಿರುವ ಕೆಎಫ್‌ಸಿ (KFC) ಮಳಿಗೆಯಿಂದ ಆನ್‌ಲೈನ್‌ನಲ್ಲಿ ತರಿಸಿಕೊಂಡ ಚಿಕನ್ ದುರ್ವಾಸನೆ ಬೀರುತ್ತಿದೆ ಎಂಬ ಗ್ರಾಹಕರ ದೂರಿನ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲಾ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಶನಿವಾರ ಮಳಿಗೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.


ದಕ್ಷಿಣ ಕನ್ನಡ ಜಿಲ್ಲಾ ಆಹಾರ ಸುರಕ್ಷತಾ ಅಂಕಿತಾಧಿಕಾರಿ ಡಾ. ಪ್ರವೀಣ್ ಕುಮಾರ್ ಸಿ.ಎಚ್. ಅವರ ನೇತೃತ್ವದಲ್ಲಿ ನಡೆದ ತಪಾಸಣೆಯಲ್ಲಿ ಮಳಿಗೆಯ ಅಡುಗೆ ಕೋಣೆ, ಕೋಲ್ಡ್ ಸ್ಟೋರೇಜ್, ಡೀಪ್ ಫ್ರೀಜರ್ ಹಾಗೂ ಚಿಕನ್ ಕರಿಯಲು ಬಳಸುವ ಎಣ್ಣೆಯ ಗುಣಮಟ್ಟವನ್ನು ಪರಿಶೀಲಿಸಲಾಯಿತು.


ಆಗಸ್ಟ್ 15ರಂದು ಗ್ರಾಹಕರೊಬ್ಬರು ಮಳಿಗೆಯಿಂದ ಆನ್‌ಲೈನ್ ಮೂಲಕ ‘ಪೆರಿ ಪೆರಿ ಚಿಕನ್’ ಆರ್ಡರ್ ಮಾಡಿದ್ದರು. ಮನೆಗೆ ತಲುಪಿದ ಬಳಿಕ ಚಿಕನ್‌ನಿಂದ ದುರ್ವಾಸನೆ ಬರುತ್ತಿರುವುದನ್ನು ಗಮನಿಸಿದ ಅವರು, ಆಹಾರ ಹಾಳಾಗಿರಬಹುದು ಎಂಬ ಅನುಮಾನ ವ್ಯಕ್ತಪಡಿಸಿ ಆಹಾರ ಸುರಕ್ಷತಾ ಇಲಾಖೆಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಅಧಿಕಾರಿಗಳು ತಕ್ಷಣ ಕಾರ್ಯಾಚರಣೆ ನಡೆಸಿದ್ದಾರೆ.


ತಪಾಸಣೆ ವೇಳೆ ಮಳಿಗೆಯಲ್ಲಿದ್ದ ಫ್ರೋಝನ್ ಲೆಗ್ ಪೀಸ್ ಚಿಕನ್, ತಾಪಮಾನ ಸಮತೋಲನಗೊಳಿಸಿದ ಚಿಕನ್ ಹಾಗೂ ಮಸಾಲೆ ಬೆರೆಸಿದ ಚಿಕನ್ ಸೇರಿದಂತೆ ಮೂರು ಮಾದರಿಗಳನ್ನು ಅಧಿಕಾರಿಗಳು ಸಂಗ್ರಹಿಸಿದ್ದಾರೆ. ಜೊತೆಗೆ ಚಿಕನ್ ಕರಿಯಲು ಬಳಸುತ್ತಿದ್ದ ಎಣ್ಣೆಯ ಮಾದರಿಯನ್ನೂ ವಶಕ್ಕೆ ಪಡೆಯಲಾಗಿದೆ.


ಸಂಗ್ರಹಿಸಿದ ಮಾದರಿಗಳನ್ನು ಗುಣಮಟ್ಟ ಹಾಗೂ ಬ್ಯಾಕ್ಟೀರಿಯಾ ಪರೀಕ್ಷೆಗಾಗಿ ಆಹಾರ ಪರೀಕ್ಷಾ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ತಪಾಸಣೆ ಸಂದರ್ಭದಲ್ಲಿ ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿ ಪ್ಯಾಕ್ ಮಾಡಲಾಗಿದ್ದ ಚಿಕನ್ ದಾಸ್ತಾನು ಕೂಡ ಪತ್ತೆಯಾಗಿದೆ. ಈ ಉತ್ಪನ್ನಗಳ ಶೆಲ್ಫ್ ಲೈಫ್ ಆರು ತಿಂಗಳಿಗಿಂತ ಹೆಚ್ಚು ಇದೆ ಎಂದು ಮಳಿಗೆಯ ಸಿಬ್ಬಂದಿ ಅಧಿಕಾರಿಗಳಿಗೆ ತಿಳಿಸಿದ್ದಾರೆ.


ಮಳಿಗೆಯಲ್ಲಿ ಸ್ವಚ್ಛತೆ ಮತ್ತು ಆಹಾರ ಸಂಗ್ರಹಣೆಯ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ. ಹಳಸಿದ ಅಥವಾ ಅನುಮಾನಾಸ್ಪದ ಆಹಾರ ಪದಾರ್ಥಗಳು ಕಂಡುಬಂದರೆ ಅವುಗಳನ್ನು ತಕ್ಷಣವೇ ತೆರವುಗೊಳಿಸುವಂತೆ ನಿರ್ದೇಶನ ನೀಡಲಾಗಿದೆ.


ಈ ಸಂಬಂಧ ಮಳಿಗೆಗೆ ಅಧಿಕೃತ ನೋಟಿಸ್ ನೀಡಲಾಗುವುದು ಎಂದು ಡಾ. ಪ್ರವೀಣ್ ಕುಮಾರ್ ಸಿ.ಎಚ್. ತಿಳಿಸಿದ್ದಾರೆ. ಸಂಸ್ಥೆಯಿಂದ ಬರುವ ಉತ್ತರ ಹಾಗೂ ಪ್ರಯೋಗಾಲಯದ ಪರೀಕ್ಷಾ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ. ಅಗತ್ಯವಿದ್ದರೆ ಜಿಲ್ಲಾಧಿಕಾರಿ ಅಥವಾ ಅಪರ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

About the Author

Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Tags:

Post a Comment

0 Comments

Post a Comment (0)
3/related/default