}

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಕೊಲೆ: ರೈಲಿನಲ್ಲಿ ಪರಾರಿಯಾಗಲು ಯತ್ನಿಸಿದ್ದ ಆರೋಪಿ ವಶಕ್ಕೆ

suddilive.com
By -
0

 


ಉಡುಪಿ: ಮಲ್ಪೆ ಮೀನುಗಾರಿಕಾ ಬಂದರಿನ ಪಡುಕೆರೆ ದಕ್ಕೆಯಲ್ಲಿ ಮೀನುಗಾರ ಕಾರ್ಮಿಕನೊಬ್ಬನನ್ನು ಕೊಲೆ ಮಾಡಿರುವ ಘಟನೆ ಮಂಗಳವಾರ ಮುಂಜಾನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ತ್ವರಿತ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ.


ಮೃತನನ್ನು ಅಭಿಷೇಕ್ ಎಂದು ಗುರುತಿಸಲಾಗಿದೆ. ಬೋಟ್‌ನಲ್ಲಿ ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿ ಅಭಿಷೇಕ್ ಹಾಗೂ ಸಹ ಕಾರ್ಮಿಕ ಗೋವಿಂದ ನಡುವೆ ಆ.24ರ ರಾತ್ರಿ ಗಲಾಟೆ ನಡೆದಿತ್ತು. ಬಳಿಕ ಆ.25ರ ಮುಂಜಾನೆ ಗಲಾಟೆ ವಿಕೋಪಕ್ಕೆ ತಿರುಗಿ ಗೋವಿಂದ ಅಭಿಷೇಕ್‌ನನ್ನು ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.


ಘಟನೆ ನಡೆದ ಮಾಹಿತಿ ದೊರೆತ ಕೂಡಲೇ ಮಲ್ಪೆ ಪೊಲೀಸ್ ಠಾಣೆಯ ಉಪನಿರೀಕ್ಷಕ (ಕಾ&ಸು) ಅನಿಲ್ ಕುಮಾರ್ ಡಿ. ನೇತೃತ್ವದಲ್ಲಿ ಹೆಡ್ ಕಾನ್‌ಸ್ಟೆಬಲ್ ಆದರ್ಶ ಹಾಗೂ ಪೊಲೀಸ್ ಕಾನ್‌ಸ್ಟೆಬಲ್ ಕುಬೇರ ಅವರು ಆರೋಪಿ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದರು.


ಕೊಲೆ ಬಳಿಕ ಆರೋಪಿ ಉಡುಪಿಗೆ ತೆರಳಿ, ಅಲ್ಲಿಂದ ರೈಲಿನಲ್ಲಿ ಹೈದರಾಬಾದ್ ಅಥವಾ ಮುಂಬೈಗೆ ಪರಾರಿಯಾಗಲು ಮುಂದಾಗಿದ್ದ ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಉಡುಪಿ ರೈಲು ನಿಲ್ದಾಣದ ಬಳಿ ಆತನನ್ನು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ.


ವಿಚಾರಣೆ ವೇಳೆ ಆರೋಪಿ ಗೋವಿಂದ ಕಳೆದ ಸುಮಾರು 15 ವರ್ಷಗಳಿಂದ ಮನೆಗೆ ತೆರಳದೆ ಮುಂಬೈ, ಹೈದರಾಬಾದ್ ಸೇರಿದಂತೆ ವಿವಿಧೆಡೆಗಳಲ್ಲಿ ಕೆಲಸ ಮಾಡಿಕೊಂಡು ವಾಸಿಸುತ್ತಿದ್ದ ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ.


ಘಟನಾ ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಹಾಗೂ ಮಲ್ಪೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.


ಈ ಸಂಬಂಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 92/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 103ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಕೊಲೆಗೆ ನಿಖರ ಕಾರಣವೇನು ಎಂಬುದೂ ಸೇರಿದಂತೆ ಘಟನೆಯ ಸಂಪೂರ್ಣ ಹಿನ್ನೆಲೆಯ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

About the Author

Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Tags:

Post a Comment

0 Comments

Post a Comment (0)
3/related/default