}

ಮಂಗಳೂರು ಮೂಡಾ ಅಧ್ಯಕ್ಷರಾಗಿ ಸಂತೋಷ್ ಕುಮಾರ್ ಶೆಟ್ಟಿ ನೇಮಕ

suddilive.com
By -
0

 


ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮೂಡಾ)ಕ್ಕೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಸದಾಶಿವ ಉಲ್ಲಾಳ್ ಅವರ ಸ್ಥಾನಕ್ಕೆ ಮಂಗಳೂರಿನ ಕೊಟ್ಟಾರ ನಿವಾಸಿ ಸಂತೋಷ್ ಕುಮಾರ್ ಶೆಟ್ಟಿ ಅವರನ್ನು ನೂತನ ಅಧ್ಯಕ್ಷರಾಗಿ ನಾಮನಿರ್ದೇಶನ ಮಾಡಲಾಗಿದೆ.


ಸರ್ಕಾರದ ಆದೇಶದಂತೆ ಸಂತೋಷ್ ಕುಮಾರ್ ಶೆಟ್ಟಿ ಅವರ ನೇಮಕಾತಿ ಆಗಸ್ಟ್ 29ರಿಂದಲೇ ಜಾರಿಗೆ ಬಂದಿದೆ. ಮುಂದಿನ ಆದೇಶದವರೆಗೆ ಅವರು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ.


ಈ ಕುರಿತು ಕರ್ನಾಟಕ ಸರ್ಕಾರದ ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಲತಾ ಕೆ. ಅವರು ಅಧಿಸೂಚನೆ ಹೊರಡಿಸಿದ್ದಾರೆ. ಅಧಿಸೂಚನೆಯ ಪ್ರತಿಯನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ಕಳುಹಿಸುವುದರ ಜೊತೆಗೆ ಕರ್ನಾಟಕ ಇ-ರಾಜ್ಯಪತ್ರದಲ್ಲಿ ಪ್ರಕಟಿಸುವಂತೆ ಸೂಚಿಸಲಾಗಿದೆ.

About the Author

Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Tags:

Post a Comment

0 Comments

Post a Comment (0)
3/related/default