}

ಮಂಗಳೂರಿನಲ್ಲಿ ತಂಬಾಕು ಮಾರಾಟಕ್ಕೆ ಬ್ರೇಕ್: 21 ವರ್ಷದೊಳಗಿನವರಿಗೆ ಮಾರಿದರೆ ಲೈಸೆನ್ಸ್ ರದ್ದು!

suddilive.com
By -
0

 

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಂಬಾಕು ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಅಪರ ಜಿಲ್ಲಾಧಿಕಾರಿ ರಾಜು ಕೆ. ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.


ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ತಂಬಾಕು ನಿಯಂತ್ರಣ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಇತ್ತೀಚಿನ ಕಾಯ್ದೆ ತಿದ್ದುಪಡಿಯನ್ವಯ 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಸಿಗರೇಟ್ ಅಥವಾ ಯಾವುದೇ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವಂತಿಲ್ಲ ಎಂದು ಸ್ಪಷ್ಟಪಡಿಸಿದರು. ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ಅಂಗಡಿಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗೂ ಕನಿಷ್ಠ 21 ವರ್ಷ ವಯಸ್ಸಾಗಿರಬೇಕು ಎಂದು ತಿಳಿಸಿದರು.


ಶಾಲಾ-ಕಾಲೇಜುಗಳ 100 ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಈ ನಿಯಮದ ಉಲ್ಲಂಘನೆ ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.


ತಾಲೂಕು ಆಡಳಿತ, ನಗರ ಸ್ಥಳೀಯ ಸಂಸ್ಥೆಗಳು, ಗ್ರಾಮ ಪಂಚಾಯಿತಿಗಳು, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಹಾಗೂ ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳು ಸಮನ್ವಯದಿಂದ ನಿರಂತರ ತಪಾಸಣೆ ಮತ್ತು ದಾಳಿ ನಡೆಸಬೇಕು. ಅಪ್ರಾಪ್ತರಿಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ಅಂಗಡಿ, ಕೆಫೆ ಅಥವಾ ಹೋಟೆಲ್‌ಗಳ ವ್ಯಾಪಾರ ಪರವಾನಗಿಯನ್ನು ತಕ್ಷಣ ರದ್ದುಗೊಳಿಸುವಂತೆ ಸೂಚಿಸಿದರು.


ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದು ಅಥವಾ ತಂಬಾಕು ಸೇವಿಸಿ ಉಗುಳುವುದು ಕಂಡುಬಂದರೆ ₹1,000 ದಂಡ ವಿಧಿಸಲಾಗುವುದು ಎಂದು ಸಭೆಯಲ್ಲಿ ತಿಳಿಸಲಾಯಿತು.


ಇನ್ನು ಸಿಗರೇಟ್‌ಗಳನ್ನು ಬಿಡಿಯಾಗಿ ಮಾರಾಟ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ. ಸಿಗರೇಟ್‌ಗಳನ್ನು ಪ್ಯಾಕ್‌ನಲ್ಲೇ ಮಾರಾಟ ಮಾಡಬೇಕು. ಗ್ರಾಹಕರಿಗೆ ಸಿಗರೇಟ್ ಸೇವನೆಗೆ ಅನುಕೂಲವಾಗುವಂತೆ ಬೆಂಕಿಪೆಟ್ಟಿಗೆ ಅಥವಾ ಲೈಟರ್‌ಗಳನ್ನು ಅಂಗಡಿಗಳಲ್ಲಿ ಇರಿಸುವವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಎಚ್ಚರಿಸಿದರು.


ಪ್ರತಿಯೊಂದು ಶಿಕ್ಷಣ ಸಂಸ್ಥೆಯೂ ‘ತಂಬಾಕು ಮುಕ್ತ ಶಾಲೆ’ ಎಂಬುದನ್ನು ಶಾಲಾ ಮುಖ್ಯಸ್ಥರು ಹಾಗೂ ಎಸ್‌ಡಿಎಂಸಿ ಮೂಲಕ ಪ್ರತಿ ತಿಂಗಳು ದೃಢೀಕರಿಸಬೇಕು. ವಿದ್ಯಾರ್ಥಿಗಳ ಬ್ಯಾಗ್‌ಗಳನ್ನು ನಿಯಮಿತವಾಗಿ ತಪಾಸಣೆ ನಡೆಸುವಂತೆ ಶಿಕ್ಷಣ ಇಲಾಖೆಗೆ ಸೂಚಿಸಲಾಗಿದೆ.


ಅದೇ ರೀತಿ, ಅಂಗಡಿ ಹಾಗೂ ಇತರ ವ್ಯಾಪಾರ ಸಂಸ್ಥೆಗಳಿಗೆ ಪರವಾನಗಿ ನೀಡುವ ಸಂದರ್ಭದಲ್ಲಿ ತಂಬಾಕು ನಿಯಂತ್ರಣಕ್ಕೆ ಸಂಬಂಧಿಸಿದ ಎಲ್ಲ ಕಡ್ಡಾಯ ಷರತ್ತುಗಳನ್ನು ಸ್ಪಷ್ಟವಾಗಿ ನಮೂದಿಸುವಂತೆ ಸ್ಥಳೀಯ ಸಂಸ್ಥೆಗಳಿಗೆ ಸೂಚನೆ ನೀಡಲಾಗಿದೆ.

About the Author

Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Tags:

Post a Comment

0 Comments

Post a Comment (0)
3/related/default