ಮಣಿಪಾಲ: ಉಡುಪಿ ಜಿಲ್ಲೆಯ ಮಣಿಪಾಲ ಸಮೀಪದ ಈಶ್ವರನಗರದಲ್ಲಿ ಆಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ನಗರಸಭೆಯ ಕುಡಿಯುವ ನೀರಿನ ಪಂಪ್‌ಹೌಸ್‌ಗೆ ನುಗ್ಗಿ ಮಗುಚಿಬಿದ್ದ ಘಟನೆ ನಡೆದಿದೆ.
ಈಶ್ವರನಗರದ ಇಳಿಜಾರು ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿ 169Aರಲ್ಲಿ ಘಟನೆ ಸಂಭವಿಸಿದೆ. ಉಡುಪಿಯಿಂದ ಹಿರಿಯಡ್ಕದ ಕಡೆಗೆ ಬಾಡಿಗೆಗೆ ತೆರಳುತ್ತಿದ್ದ ಆಟೋ ಏಕಾಏಕಿ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿದ್ದ ಪಂಪ್‌ಹೌಸ್‌ಗೆ ನುಗ್ಗಿದೆ ಎಂದು ತಿಳಿದುಬಂದಿದೆ.
ಅಪಘಾತದಲ್ಲಿ ಆಟೋ ಚಾಲಕ ಹಾಗೂ ಅದರಲ್ಲಿದ್ದ ಮಹಿಳೆಗೆ ಗಾಯಗಳಾಗಿದ್ದು, ಇಬ್ಬರನ್ನೂ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಟೋದಲ್ಲಿದ್ದ ಮಗು ಅಪಾಯದಿಂದ ಪಾರಾಗಿದೆ ಎಂದು ತಿಳಿದುಬಂದಿದೆ. ಆಟೋ ಚಾಲಕ ಪೆರಂಪಳ್ಳಿ ಮೂಲದವರು ಎನ್ನಲಾಗಿದೆ.
ಸ್ಥಳೀಯರ ಪ್ರಕಾರ, ಈಶ್ವರನಗರದ ಈ ಭಾಗದಲ್ಲಿ ರಸ್ತೆ ಇಳಿಜಾರಾಗಿದ್ದು, ಏಕಾಏಕಿ ತಿರುವು ಪಡೆದುಕೊಳ್ಳುತ್ತದೆ. ಹೀಗಾಗಿ ವೇಗವಾಗಿ ಅಥವಾ ಹೊಸದಾಗಿ ಈ ಮಾರ್ಗದಲ್ಲಿ ಸಂಚರಿಸುವ ವಾಹನ ಚಾಲಕರು ತಿರುವನ್ನು ಅಂದಾಜಿಸಲು ಕಷ್ಟಪಡುವ ಪರಿಸ್ಥಿತಿ ಇದೆ. ಇದೇ ಕಾರಣದಿಂದ ಈ ಭಾಗದಲ್ಲಿ ಪದೇಪದೇ ಅಪಘಾತಗಳು ಸಂಭವಿಸುತ್ತಿವೆ ಎಂಬ ಆರೋಪವೂ ಕೇಳಿಬಂದಿದೆ.
ತಿರುವಿನ ಮುನ್ನೆಚ್ಚರಿಕೆಗಾಗಿ ಸೂಚನಾ ಫಲಕ ಅಳವಡಿಸಿದ್ದರೂ, ಇಳಿಜಾರು ಮತ್ತು ಏಕಾಏಕಿ ಎದುರಾಗುವ ತಿರುವಿನಿಂದಾಗಿ ವಾಹನ ಸವಾರರಿಗೆ ಸಮರ್ಪಕವಾಗಿ ರಸ್ತೆ ಅಂದಾಜಿಸಲು ಸಾಧ್ಯವಾಗುತ್ತಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ. ಅಪಘಾತಗಳನ್ನು ತಡೆಗಟ್ಟಲು ರಸ್ತೆಯ ವಿನ್ಯಾಸದಲ್ಲಿ ಅಗತ್ಯ ಬದಲಾವಣೆ ಮಾಡುವುದರ ಜೊತೆಗೆ ಸೂಕ್ತ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಅಪಘಾತಕ್ಕೀಡಾದ ಆಟೋ ರಿಕ್ಷಾದ ಮುಂಭಾಗದಲ್ಲಿ ‘ಬ್ರಹ್ಮ ಬೈದರ್ಕಳ’ ಎಂದು ಬರೆಯಲಾಗಿದ್ದು, ಹೂವಿನ ಹಾರವೂ ಹಾಕಿರುವುದು ಕಂಡುಬಂದಿದೆ. ಘಟನೆಗೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರಿಸಿದ್ದಾರೆ.
About the Author
Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.
📢 SUDDI LIVE WhatsApp Community
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.
📲 Join WhatsApp Community📢 SUDDI LIVE Facebook Page
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.
👍 Follow SUDDI LIVEನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

