ನವದೆಹಲಿ: ಸಂಸತ್ ಆವರಣದಲ್ಲಿ ನಡೆದ ಪ್ರತಿಭಟನೆಯ ವೇಳೆ ಪಕ್ಷೇತರ ಸಂಸದ ಪಪ್ಪು ಯಾದವ್ ಅವರು ಶ್ರೀರಾಮ ಮಂದಿರದ ದೇಣಿಗೆ ವಿಚಾರವನ್ನು ಉಲ್ಲೇಖಿಸಿ ವ್ಯಂಗ್ಯಾತ್ಮಕ ನಾಟಕ ಪ್ರದರ್ಶಿಸಿದ್ದು, ಇದೀಗ ಅದು ವಿವಾದಕ್ಕೆ ಕಾರಣವಾಗಿದೆ.
ಸಾಧುವಿನ ವೇಷ ಧರಿಸಿದ್ದ ಪಪ್ಪು ಯಾದವ್ ಅವರು, ಶ್ರೀರಾಮ ಮಂದಿರದ ದೇಣಿಗೆಯನ್ನು ಕಳವು ಮಾಡುತ್ತಿರುವಂತೆ ಬಿಂಬಿಸುವ ದೃಶ್ಯವನ್ನು ನಾಟಕದ ಮೂಲಕ ಪ್ರದರ್ಶಿಸಿದರು. ಈ ವೇಳೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಪ್ರತಿಪಕ್ಷದ ಹಲವು ಸಂಸದರು ಸ್ಥಳದಲ್ಲಿದ್ದು, ಕೆಲವರು ನಾಟಕದಲ್ಲಿ ಭಾಗವಹಿಸಿದ್ದರು ಎನ್ನಲಾಗಿದೆ.
ಈ ಘಟನೆಗೆ ಸಂಬಂಧಿಸಿ ಸೂರ್ಯ ಮೈಥಿಲ್ ಎಂಬವರು ಜಹಾಂಗೀರ್‌ಪುರಿ ಪೊಲೀಸ್ ಠಾಣೆಯಲ್ಲಿ ಪಪ್ಪು ಯಾದವ್ ವಿರುದ್ಧ ದೂರು ದಾಖಲಿಸಿದ್ದಾರೆ. ನಾಟಕದ ಮೂಲಕ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಪೊಲೀಸರು ದೂರು ಸ್ವೀಕರಿಸಿದ್ದು, ಪ್ರಕರಣದ ಕುರಿತು ಪ್ರಾಥಮಿಕ ತನಿಖೆ ಆರಂಭಿಸಿದ್ದಾರೆ.
About the Author
Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.
📢 SUDDI LIVE WhatsApp Community
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.
📲 Join WhatsApp Community📢 SUDDI LIVE Facebook Page
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.
👍 Follow SUDDI LIVEನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

