ಉಡುಪಿ: ಸನಾತನ ಧರ್ಮಕ್ಕೆ ಆಂತರಿಕವಾಗಿ ಹಾಗೂ ಬಹಿರಂಗವಾಗಿ ಹಲವು ಸವಾಲುಗಳು ಎದುರಾಗುತ್ತಿವೆ. ಇಂತಹ ಸಂದರ್ಭಗಳಲ್ಲಿ ಹಿಂದುಗಳು ಒಗ್ಗಟ್ಟನ್ನು ಕಾಪಾಡಿಕೊಂಡು ಸವಾಲುಗಳನ್ನು ಎದುರಿಸಬೇಕು ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಕರೆ ನೀಡಿದರು.
ನವದೆಹಲಿಯ ರೋಹಿಣಿ ಕ್ಷೇತ್ರದ ಸೆಕ್ಟರ್ 4ರ ದಲಿತ ಬಡಾವಣೆಗೆ ಭಾನುವಾರ ಭೇಟಿ ನೀಡಿದ ಅವರು, ವಿವಿಧ ಮನೆಗಳಿಗೆ ತೆರಳಿ ನಿವಾಸಿಗಳೊಂದಿಗೆ ಮಾತನಾಡಿದರು.
ಮನೆ, ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿ. ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಮೂಲಕ ಅವರನ್ನು ದೇಶದ ಜವಾಬ್ದಾರಿಯುತ ನಾಗರಿಕರನ್ನಾಗಿ ರೂಪಿಸಬೇಕು ಎಂದು ಶ್ರೀಗಳು ಹೇಳಿದರು.
ಬಡಾವಣೆಯಲ್ಲಿ ಸ್ವಚ್ಛತೆ ಹಾಗೂ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಸ್ಥಳೀಯ ಜನಪ್ರತಿನಿಧಿಗಳಿಗೆ ಸೂಚಿಸಿದ ಅವರು, ಹಳೆಯ ಮನೆಗಳನ್ನು ಕಾರ್ಪೊರೇಟ್ ಸಂಸ್ಥೆಗಳ ಸಹಕಾರದಿಂದ ದುರಸ್ತಿ ಮಾಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಸಲಹೆ ನೀಡಿದರು.
ಶ್ರೀಗಳ ಆಗಮನದ ಹಿನ್ನೆಲೆಯಲ್ಲಿ ಬಡಾವಣೆಯ 300ಕ್ಕೂ ಅಧಿಕ ಮಂದಿ ರಸ್ತೆಯನ್ನು ರಂಗೋಲಿಯಿಂದ ಅಲಂಕರಿಸಿ, ಹೂವಿನ ಮಳೆಗರೆದು ಭಕ್ತಿಭಾವದಿಂದ ಸ್ವಾಗತಿಸಿದರು. ಬಳಿಕ ಶ್ರೀಗಳು ಐದು ಮನೆಗಳಿಗೆ ಭೇಟಿ ನೀಡಿ, ಮಠದ ವತಿಯಿಂದ ನೀಡಲಾದ ಅಯೋಧ್ಯೆಯ ಶ್ರೀರಾಮ ಹಾಗೂ ಉಡುಪಿ ಶ್ರೀಕೃಷ್ಣನ ಚಿತ್ರಗಳನ್ನು ಪ್ರತಿಷ್ಠಾಪಿಸಿ ದೀಪ ಬೆಳಗಿಸಿದರು.
ಮನೆಮಂದಿಗೆ ರಾಮಮಂತ್ರವನ್ನು ಹತ್ತು ಬಾರಿ ಉಪದೇಶಿಸಿದ ಶ್ರೀಗಳು, ನಿತ್ಯವೂ ರಾಮಕೃಷ್ಣ ಮಂತ್ರವನ್ನು ಜಪಿಸುವಂತೆ ತಿಳಿಸಿದರು. ಬಳಿಕ ಪ್ರಸಾದ ವಿತರಿಸಿ ಆಶೀರ್ವದಿಸಿದರು. ಮಠದ ವತಿಯಿಂದ ಸಿಹಿತಿಂಡಿಗಳನ್ನು ಒಳಗೊಂಡ ಪ್ರಸಾದದ ಕಿಟ್‌ಗಳನ್ನು ಸಹ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕ ಕುಲವಂತ ರಾಣಾ ಉಪಸ್ಥಿತರಿದ್ದರು. ವಿಶ್ವ ಹಿಂದೂ ಪರಿಷತ್ ಹಾಗೂ ಸೇವಾ ಭಾರತಿಯ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
About the Author
Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.
📢 SUDDI LIVE WhatsApp Community
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.
📲 Join WhatsApp Community📢 SUDDI LIVE Facebook Page
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.
👍 Follow SUDDI LIVEನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

