}

ಪುತ್ತೂರಿನಲ್ಲಿ ಆಟೋ ಚಾಲಕನ ಪ್ರಾಮಾಣಿಕತೆ: ₹3 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಪರ್ಸ್ ವಾರಸುದಾರರಿಗೆ ಹಸ್ತಾಂತರ

suddilive.com
By -
0

 



ಪುತ್ತೂರು: ರಸ್ತೆಯಲ್ಲಿ ಸಿಕ್ಕ ಪರ್ಸ್‌ವೊಂದನ್ನು ಅದರ ವಾರಸುದಾರರನ್ನು ಪತ್ತೆಹಚ್ಚಿ, ಅದರಲ್ಲಿದ್ದ ಸುಮಾರು ₹3 ಲಕ್ಷ ಮೌಲ್ಯದ ಚಿನ್ನಾಭರಣ, ಹಣ ಹಾಗೂ ಪ್ರಮುಖ ದಾಖಲೆಗಳನ್ನು ಸುರಕ್ಷಿತವಾಗಿ ಹಸ್ತಾಂತರಿಸುವ ಮೂಲಕ ಆಟೋ ಚಾಲಕರೊಬ್ಬರು ಪ್ರಾಮಾಣಿಕತೆ ಮೆರೆದಿದ್ದಾರೆ.


ಆ.27ರಂದು ಒಳಮೊಗ್ರು ಗ್ರಾಮದ ಕುಂಬ್ರ ರಾಷ್ಟ್ರೀಯ ಹೆದ್ದಾರಿಯಲ್ಲಿ ಆಟೋ ಚಾಲಕ ಮಹಮ್ಮದ್ ಅಶ್ರಫ್ ಮರಿಕೆಮನೆ ಅವರಿಗೆ ಚಿಕ್ಕ ಪರ್ಸ್‌ವೊಂದು ಸಿಕ್ಕಿತ್ತು. ಪರ್ಸ್‌ನಲ್ಲಿದ್ದ ಆಧಾರ್ ಕಾರ್ಡ್ ಪರಿಶೀಲಿಸಿದಾಗ ಅದರಲ್ಲಿದ್ದ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ವಿಚಾರಿಸಿದ್ದಾರೆ. ಈ ವೇಳೆ ಪರ್ಸ್‌ ಪಾಂಡಿತಡ್ಕ ಕೈಕರ ನಿವಾಸಿ ದಿವಾಕರ ಆಚಾರ್ಯ ಅವರಿಗೆ ಸೇರಿದ್ದು ಎಂದು ತಿಳಿದುಬಂದಿದೆ.


ಬೈಕ್‌ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಪರ್ಸ್‌ ಕೆಳಗೆ ಬಿದ್ದಿತ್ತು ಎಂದು ದಿವಾಕರ ಆಚಾರ್ಯ ತಿಳಿಸಿದ್ದಾರೆ. ಪರ್ಸ್‌ನಲ್ಲಿ ಸುಮಾರು ₹3 ಲಕ್ಷ ಮೌಲ್ಯದ ಚಿನ್ನಾಭರಣ, ನಗದು, ಆಧಾರ್ ಕಾರ್ಡ್ ಸೇರಿದಂತೆ ಹಲವು ಪ್ರಮುಖ ವಸ್ತುಗಳಿದ್ದವು.


ಬಳಿಕ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ ಸುಷ್ಮಾ ಅವರ ಸಮಕ್ಷಮದಲ್ಲಿ ಮಹಮ್ಮದ್ ಅಶ್ರಫ್ ಅವರು ಪರ್ಸ್‌ ಹಾಗೂ ಅದರಲ್ಲಿದ್ದ ಎಲ್ಲಾ ವಸ್ತುಗಳನ್ನು ದಿವಾಕರ ಆಚಾರ್ಯ ಅವರಿಗೆ ಹಸ್ತಾಂತರಿಸಿದರು.


ಕಳೆದುಹೋದ ಅಮೂಲ್ಯ ವಸ್ತುಗಳನ್ನು ಯಾವುದೇ ಸ್ವಾರ್ಥವಿಲ್ಲದೆ ವಾರಸುದಾರರಿಗೆ ಮರಳಿಸಿದ ಆಟೋ ಚಾಲಕ ಮಹಮ್ಮದ್ ಅಶ್ರಫ್ ಅವರ ಪ್ರಾಮಾಣಿಕತೆಗೆ ಪಿಎಸ್‌ಐ ಸುಷ್ಮಾ ಅವರು ಮೆಚ್ಚುಗೆ ವ್ಯಕ್ತಪಡಿಸಿ, ಅವರ ಕಾರ್ಯಕ್ಕೆ ಶುಭ ಹಾರೈಸಿದರು.

About the Author

Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Tags:

Post a Comment

0 Comments

Post a Comment (0)
3/related/default