ಮಂಗಳೂರು, ಆ.28: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಪವಿತ್ರ ಕನ್ಯಾಮರಿಯಮ್ಮನ ಜನ್ಮೋತ್ಸವದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರ್ಕಾರಿ ರಜೆ ಘೋಷಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಅವರಿಗೆ ಮನವಿ ಸಲ್ಲಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ NSUI ಪ್ರಧಾನ ಕಾರ್ಯದರ್ಶಿ ಈಥನ್ ತಾವ್ರೊ ಅವರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದು, ಮಂಗಳೂರಿನ ಕ್ರೈಸ್ತ ಸಮುದಾಯವು ಕನ್ಯಾಮರಿಯಮ್ಮನ ಜನ್ಮೋತ್ಸವವನ್ನು ಪ್ರತಿವರ್ಷ ಧಾರ್ಮಿಕ ಶ್ರದ್ಧೆ ಹಾಗೂ ಸಾಂಪ್ರದಾಯಿಕ ಆಚರಣೆಗಳೊಂದಿಗೆ ಆಚರಿಸುತ್ತಾ ಬಂದಿದೆ ಎಂದು ತಿಳಿಸಿದ್ದಾರೆ.
ಕನ್ಯಾಮರಿಯಮ್ಮನ ಜನ್ಮೋತ್ಸವವು ಮಂಗಳೂರಿನ ಕ್ಯಾಥೋಲಿಕ್ ಸಮುದಾಯದ ಧಾರ್ಮಿಕ ನಂಬಿಕೆ, ಸಂಸ್ಕೃತಿ ಹಾಗೂ ಪರಂಪರೆಯೊಂದಿಗೆ ನಿಕಟವಾಗಿ ಬೆಸೆದುಕೊಂಡಿದೆ. ಹಬ್ಬದ ಸಂದರ್ಭದಲ್ಲಿ ಕುಟುಂಬಗಳು, ಚರ್ಚ್‌ಗಳು ಮತ್ತು ಸಮುದಾಯದವರು ಒಟ್ಟಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಾರೆ.
ಮಂಗಳೂರಿನ ಸಾಂಸ್ಕೃತಿಕ ವೈವಿಧ್ಯತೆ ಹಾಗೂ ಸೌಹಾರ್ದತೆಯ ಪ್ರತೀಕವಾಗಿಯೂ ಈ ಆಚರಣೆಯನ್ನು ಕಾಣಲಾಗುತ್ತದೆ. ಹಲವು ವರ್ಷಗಳಿಂದ ನಡೆದುಕೊಂಡು ಬಂದಿರುವ ಈ ಪರಂಪರೆಗೆ ಗೌರವ ನೀಡುವ ನಿಟ್ಟಿನಲ್ಲಿ ಸೆಪ್ಟೆಂಬರ್ 8ರಂದು ಜಿಲ್ಲೆಯಲ್ಲಿ ಸರ್ಕಾರಿ ರಜೆ ಘೋಷಿಸುವಂತೆ ಮನವಿಯಲ್ಲಿ ಕೋರಲಾಗಿದೆ.
ಕ್ರೈಸ್ತ ಸಮುದಾಯದ ಧಾರ್ಮಿಕ ಭಾವನೆ ಹಾಗೂ ಬಹುಕಾಲದ ಸಂಪ್ರದಾಯವನ್ನು ಪರಿಗಣಿಸಿ, ಈ ಬೇಡಿಕೆಯ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲಾಗಿದೆ.
About the Author
Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.
📢 SUDDI LIVE WhatsApp Community
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.
📲 Join WhatsApp Community📢 SUDDI LIVE Facebook Page
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.
👍 Follow SUDDI LIVEನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

