}

ಶೇರ ಬುಡೋಳಿ: ಖಿಳ್ರ್ ಜುಮಾ ಮಸೀದಿಯಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ

suddilive.com
By -
0


ಶೇರ ಬುಡೋಳಿಯ ಖಿಳ್ರ್ ಜುಮಾ ಮಸೀದಿ ಆವರಣದಲ್ಲಿ ದೇಶದ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.


ಮಸೀದಿಯ ಖತೀಬರಾದ ಸೈಫ್ ಅಲಿ ಸುಲ್ತಾನಿ ಫುರ್ಖಾನಿ ಅಲ್ ಅದವಿ ಉಸ್ತಾದರು ಧ್ವಜಾರೋಹಣ ನೆರವೇರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಜಮಾಅತ್ ಅಧ್ಯಕ್ಷರಾದ ಡಾ. ಉಮ್ಮರ್ ಫಾರೂಕ್ ಅವರು ಕಾರ್ಯಕ್ರಮಕ್ಕೆ ಆಗಮಿಸಿದ್ದವರನ್ನು ಸ್ವಾಗತಿಸಿ, ಸ್ವಾತಂತ್ರ್ಯ ದಿನಾಚರಣೆಯ ಮಹತ್ವದ ಕುರಿತು ಸಂದೇಶ ನೀಡಿದರು.


ಕಾರ್ಯಕ್ರಮದಲ್ಲಿ ಜಮಾಅತ್ ಗೌರವಾಧ್ಯಕ್ಷ ಇಬ್ರಾಹಿಂ ಹಾಜಿ, ಮಸೀದಿಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹಬೀಬ್ ಶೇರ ಸೇರಿದಂತೆ ಸಮಿತಿಯ ಪ್ರಮುಖರಾದ ಅಬ್ದುಲ್ ಹಮೀದ್ ಶೇರ, ಅಬ್ದುಲ್ ಖಾದರ್ ಹಾಜಿ ಶೇರ, ಮುಹಮ್ಮದ್ ಹನೀಫಿ ಬುಡೋಳಿ, ಅಬ್ದುಲ್ ರಝಾಕ್ ಬುಡೋಳಿ, ಮುಹಮ್ಮದ್ ಮುನ್ತಾಕ್ ಅಲ್ ಅದವಿ, ರಾಝಿಕ್ ಶೇರ ಹಾಗೂ ಮುಹಮ್ಮದ್ ಮುಸ್ತಫಾ ಶೇರ ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಸಿರಾಜುಲ್ ಉಲೂಂ ಮದ್ರಸದ ವಿದ್ಯಾರ್ಥಿಗಳು ಸ್ವಾತಂತ್ರ್ಯೋತ್ಸವದ ಅಂಗವಾಗಿ ಭಕ್ತಿ ಗೀತೆಗಳನ್ನು ಹಾಡಿದರು. ಕಾರ್ಯಕ್ರಮದ ಕೊನೆಯಲ್ಲಿ ಸಿಹಿತಿಂಡಿ ವಿತರಿಸಲಾಯಿತು. ಬಳಿಕ ರಾಷ್ಟ್ರಗೀತೆ ಹಾಡುವುದರೊಂದಿಗೆ ಕಾರ್ಯಕ್ರಮಕ್ಕೆ ತೆರೆ ಎಳೆಯಲಾಯಿತು.

About the Author

Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Tags:

Post a Comment

0 Comments

Post a Comment (0)
3/related/default