ಸುಳ್ಯ: ಅರಂತೋಡುವಿನ ದೇವರಕೊಲ್ಲಿ ಬಳಿ ಬುಧವಾರ ಸಂಜೆ ಲಾರಿಯೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಟೆಂಪೋ ಟ್ರಾವೆಲರ್ (ಟಿಟಿ) ವಾಹನದ ಮೇಲೆ ಪಲ್ಟಿಯಾದ ಘಟನೆ ನಡೆದಿದೆ. ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗುಜರಾತ್‌ನ ಅಹಮದಾಬಾದ್‌ನಿಂದ ಬಂದಿದ್ದ ಪ್ರವಾಸಿಗರ ತಂಡವೊಂದು ಮಡಿಕೇರಿಯಿಂದ ಮಂಗಳೂರು ಕಡೆಗೆ ತೆರಳುತ್ತಿತ್ತು. ದೇವರಕೊಲ್ಲಿ ಅಬ್ಬಿ ಜಲಪಾತದ ಸಮೀಪ ರಸ್ತೆ ಬದಿಯಲ್ಲಿ ಟಿಟಿ ವಾಹನವನ್ನು ನಿಲ್ಲಿಸಿ ಪ್ರವಾಸಿಗರು ವಿಶ್ರಾಂತಿ ಪಡೆಯುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.
ಸುಳ್ಯ ಕಡೆಗೆ ಸಂಚರಿಸುತ್ತಿದ್ದ ಲಾರಿ ಏಕಾಏಕಿ ನಿಯಂತ್ರಣ ತಪ್ಪಿ ನಿಂತಿದ್ದ ಟಿಟಿ ವಾಹನದ ಮೇಲೆ ಉರುಳಿ ಬಿದ್ದಿದೆ. ಟಿಟಿಯಲ್ಲಿದ್ದ ಏಳು ಪ್ರವಾಸಿಗರ ಪೈಕಿ ಓರ್ವರಿಗೆ ಗಂಭೀರ ಗಾಯಗಳಾಗಿದ್ದು, ಲಾರಿ ಚಾಲಕ ಹಾಗೂ ಕ್ಲೀನರ್ ಕೂಡ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಸ್ಥಳೀಯರು ಹಾಗೂ ಆಂಬ್ಯುಲೆನ್ಸ್ ಸಿಬ್ಬಂದಿ ನೆರವಿನಿಂದ ತಕ್ಷಣ ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು.
ಅಪಘಾತದಿಂದ ಕೆಲಕಾಲ ಸಂಚಾರಕ್ಕೆ ಅಡ್ಡಿಯುಂಟಾಗಿತ್ತು. ಬಳಿಕ ಕ್ರೇನ್ ಸಹಾಯದಿಂದ ಪಲ್ಟಿಯಾಗಿದ್ದ ಲಾರಿಯನ್ನು ತೆರವುಗೊಳಿಸಿ ಹೆದ್ದಾರಿಯಲ್ಲಿ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.
About the Author
Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.
📢 SUDDI LIVE WhatsApp Community
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.
📲 Join WhatsApp Community📢 SUDDI LIVE Facebook Page
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.
👍 Follow SUDDI LIVEನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

